ಕೂಡಿಗೆ. ಜೂ. ೨೮: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಚನ್ನರಾಜ (ಕುಳ್ಳಪ್ಪ) ಎಂಬವರಿಗೆ ಸೇರಿದ ಮನೆಯ ಅಡುಗೆ ಕೋಣೆಯ ಗೋಡೆ ಭಾಗಶಃ ಮಳೆಯಿಂದಾಗಿ ಕುಸಿತಗೊಂಡ ಹಿನ್ನೆಲೆಯಲ್ಲಿ ಸ್ಥಳÀಕ್ಕೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ನೋಡಲ್ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಸಿದ್ದೇಗೌಡ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಇದ್ದರು.