ವೀರಾಜಪೇಟೆ, ಜೂ. ೨೮: ವೀರಾಜಪೇಟೆಯ ನಾಟ್ಯಮಯೂರಿ ನೃತ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ "ಕರುನಾಡ ಕಲ್ಪವೃಕ್ಷ "ರಾಷ್ಟç ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನೃತ್ಯೋತ್ಸವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಮಾಜಿ ನ್ಯಾಯಾಧೀಶರು ಹಾಗೂ ಮಾಜಿ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಡಾ. ಶೇಖ್ ವಾಹಿದ್ ದಾವೂದ್, ಚಲನಚಿತ್ರ ನಟರಾದ ಶಶಿಧರ್ ಕೋಟೆ, ಕೆ.ಪಿ.ಸಿ.ಸಿ. ಅಧ್ಯಕ್ಷ ಮಂಜುನಾಥ್ ಶೆಟ್ಟಿ ಕಾರ್ಗದ್ದೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ರವಿ ಶೆಟ್ಟಿ ಬೈಂದೂರು, ಗೌರವ ಅಧ್ಯಕ್ಷ ಡಾ. ಕೆಂಚನೂರು ಶಂಕರ್, ನಾಟ್ಯಮಯೂರಿ ನೃತ್ಯ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಸೇರಿದಂತೆ ಇತರರು ಭಾಗವಹಿಸಿದ್ದರು.
ಈ ಸಂದರ್ಭ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದ ಹಲವಾರು ಕಡೆಗಳಿಂದ ನೃತ್ಯ ತಂಡಗಳು ಆಗಮಿಸಿ ಉತ್ತಮ ಪ್ರದರ್ಶನ ನೀಡಿದರು.