ಕೂಡಿಗೆ, ಜೂ. ೨೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮದ ಜಯ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿದಿದೆ.

ಜಯ ಅವರ ಮನೆಯಲ್ಲಿ ಅವರ ಸಂಬAಧಿಕರಾದ ದೇವಪ್ಪ (೩೫) ಎಂಬವರು ಮಲಗಿದ್ದ ಸಂದರ್ಭ ಗೋಡೆ ಕುಸಿತಗೊಂಡ ಹಿನ್ನೆಲೆಯಲ್ಲಿ ದೇವಪ್ಪ ಅವರಿಗೆ ಗಾಯಗಳಾಗಿದ್ದು, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಆಡಳಿತ ಅಧಿಕಾರಿ ಗುರುದರ್ಶನ್ ಸಿಬ್ಬಂದಿ ಲೋಕೇಶ್ ಭೇಟಿ ನೀಡಿದ್ದರು.