ಮಡಿಕೇರಿ, ಜೂ. ೨೮: ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ. ಅರ್ಧ ಶತಮಾನ ಎಂಬ ಹೆಸರಿನಲ್ಲಿ ೩ ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯಿರುವ ೨೦ ರಿಂದ ೫೦ ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ hಣಣಠಿs://sಚಿhiಣhಥಿಚಿಚಿಛಿಚಿಜemಥಿ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್. ಕರಿಯಪ್ಪ ತಿಳಿಸಿದ್ದಾರೆ.

ಕೃಷಿ ಯಂತ್ರೋಪಕರಣಗಳಿಗೆ

ಮಡಿಕೇರಿ, ಜೂ. ೨೮: ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ. ೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿAದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ (ಆರ್.ಟಿ.ಸಿ.), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ. ೧೦೦ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ.

ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪೆçÃಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ. ೫೦ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಯನ್ನು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

ಟೈಲರಿಂಗ್ ಉಚಿತ ತರಬೇತಿಗೆ

ಮಡಿಕೇರಿ, ಜೂ. ೨೮: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ ೩೧ ದಿನಗಳ ಉಚಿತ ತರಬೇತಿಯು ಜುಲೈ ೨೬ ರಿಂದ ಪ್ರಾರಂಭ ವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸ ಬಹುದಾಗಿದೆ. ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯ ವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ. ೯೭೪೦೯೮೨೫೮೫, ೯೨೪೧೪೮೨೫೪೧, ೯೧೧೩೮೮೦೩೨೪ ಅನ್ನು ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ

ಮಡಿಕೇರಿ, ಜೂ. ೨೮: ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ ೨೦೨೫-೨೬ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವರ್ಗ- ೧ ಮತ್ತು ಪ್ರವರ್ಗ-೨ಎ, ೩ಎ, ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-೧ ರ ಅಭ್ಯರ್ಥಿಗಳಿಗೆ ರೂ. ೩,೫೦,೦೦೦ ಹಾಗೂ ಪ್ರವರ್ಗ-೨ಎ, ೩ಎ, ೩ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. ೨,೫೦,೦೦೦ ಒಳಪಟ್ಟಿರಬೇಕು. ಪ್ರವರ್ಗ-೧ ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಪ್ರವರ್ಗ-೧ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು ೨ ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-೧ರ ಅಭ್ಯರ್ಥಿಗಳಿಗೆ ೪೦ ವರ್ಷದೊಳಗಿರಬೇಕು. ಪ್ರವರ್ಗ ೨ಎ, ೩ಎ, ೩ಬಿರ ಅಭ್ಯರ್ಥಿಗಳಿಗೆ ೩೮ ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಯು ೪ ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ. ೪,೦೦೦ ರಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ ೧೦ ಅಭ್ಯರ್ಥಿಗಳಿಗೆ ನೀಡಲು ಅವಕಾಶವಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ. ೧೦ ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ. ೧೦೦ ರ ಛಾಪಾ ಕಾಗದದಲ್ಲಿ ಬರೆದುಕೊಡತಕ್ಕದ್ದು.

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಿಂದ ಪಡೆದು ಜುಲೈ ೨೪ ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌAಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ. ೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಕೃಷಿ ಯಂತ್ರೋಪಕರಣಕ್ಕೆ

ಸೋಮವಾರಪೇಟೆ, ಜೂ. ೨೮: ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ೨೦೨೫-೨೬ನೇ ಸಾಲಿನಲ್ಲಿ ಶೇ. ೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು ಎಂದು ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಕೆ.ಪಿ. ವೀರಣ್ಣ ತಿಳಿಸಿದ್ದಾರೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ಪಡೆದುಕೊಂಡು ಆರ್‌ಟಿಸಿ, ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಒಂದು ಭಾವಚಿತ್ರ, ರೂ. ೧೦೦ರ ಛಾಪಾ ಕಾಗದದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.