ಸಿದ್ದಾಪುರ, ಜೂ. ೨೯: ಇತ್ತೀಚೆಗೆ ಗಾಳಿ ಮಳೆಯಿಂದಾಗಿ ಮಾಲ್ದಾರೆ ಗ್ರಾಮದ ಬಾಡಗ ಬಾಣಂಗಾಲ ಗ್ರಾಮ ವ್ಯಾಪ್ತಿಯ ಕಾಲೋನಿ ನಿವಾಸಿಗಳಾದ ಅನಿಲ್ ಕುಮಾರ್ ಹಾಗೂ ಇಬ್ರಾಹಿಂ ಎಂಬವರ ಮನೆಗಳು ಗಾಳಿ - ಮಳೆಗೆ ಸಿಲುಕಿ ಕುಸಿದಿತ್ತು.
ಈ ಹಿನ್ನೆಲೆಯಲ್ಲಿ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹಾಗೂ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀವ್ರವಾಗಿ ಕುಸಿದಿರುವ ಮನೆ ಮಾಲೀಕರಿಗೆ ಸರ್ಕಾರದ ವತಿಯಿಂದ ವಸತಿ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಕೋರಿದರು. ಗ್ರಾಮ ಪಂಚಾಯಿತಿ ವತಿಯಿಂದ ವಸತಿ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಿ ಕೊಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಈಗಾಗಲೇ ವಸತಿ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಬಡವರಿಗೆ ಮನೆ ನೀಡಲು ಪಟ್ಟಿ ತಯಾರಿಸಲಾಗಿದ್ದು ಈ ಪೈಕಿ ಮನೆ ಕಳೆದುಕೊಂಡ ಇಬ್ಬರಿಗೂ ಗ್ರಾಮ ಪಂಚಾಯಿತಿ ವತಿಯಿಂದ ಮನೆ ನಿರ್ಮಿಸಿ ಕೊಡುವಂತೆ ತಿಳಿಸಿದರು. ಜಿಲ್ಲಾಧಿಕಾರಿ ವೆಂಕಟರಾಜು ತಾಲೂಕು ತಹಶೀಲ್ದಾರ್ ಅನಂತ್ ಶಂಕರ್ ಕಂದಾಯ ಪರೀಕ್ಷಕ ಅನಿಲ್ ಕುಮಾರ್ ಮತ್ತು ಗ್ರಾಮ ಪಂಚಾಯಿತಿ ಅಧಕ್ಷೆ ಮಾಲತಿ ಸದಸ್ಯ ಹನೀಫ್, ಇಸ್ಮಾಯಿಲ್ ಹಾಗೂ ಇನ್ನಿತರರು ಹಾಜರಿದ್ದರು.