ಕೂಡಿಗೆ, ಜೂ. ೨೯: ಕನ್ನಡ ಜಾನಪದ ಪರಿಷತ್, ಬೆಂಗಳೂರು ಇವರ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ೨೫ನೇ ಸಾಲಿನ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಗಿದೆ.
ಕನ್ನಡ ಉಪನ್ಯಾಸಕರಾಗಿ ಮತ್ತು ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಜಮೀರ್ ಅಹಮದ್ ಅವರು, ಮೂಲತಃ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ನಿರ್ದೇಶಕ ಎಂ.ಡಿ. ಹಾಷಂ ತುಂಬಿದ ಮನೆ ಮತ್ತು ದಿ. ಮೊಖ್‌ಬುಲ್ ದಂಪತಿಯ ಪುತ್ರ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತ ಗಂಗೋತ್ರಿ, ಮೈಸೂರು, ಇಲ್ಲಿನ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾದ ಪ್ರೊ. ಡಿ. ನಾಗಣ್ಣ ಅವರ ಮಾರ್ಗದಶÀðನದಲ್ಲಿ ‘ಮೈಸೂರು ನಗರದ ಮುಸ್ಲಿಮರು, ಸಾಂಸ್ಕೃತಿಕ ಅಧ್ಯಯನ' ಎಂಬ ವಿಷಯದಲ್ಲಿ ಇವರು ಪಿ.ಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ.
ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಮೊದಲಾದ ಸಂಘ-ಸAಸ್ಥೆಗಳಲ್ಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರ ವತಿಯಿಂದ ಸೇವೆಯನ್ನು ಗುರುತಿಸಿ ೨೦೨೦ರಲ್ಲಿ ಕೊಡಗು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ೨೦೨೪ ರಲ್ಲಿ, ಸ್ನೇಹ ಸಿರಿ ಬಳಗ (ರಿ) ಕೊಡಗು "ಶಿಕ್ಷಕ ಸಿರಿ" ಪ್ರಶಸ್ತಿಯನ್ನು ನೀಡಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ ೨೦೨೪ರಲ್ಲಿ ಹಾಸನ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟಿçÃಯ ಹಬ್ಬಗಳ ಆಚರಣೆಯ ಸಮಿತಿ, ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ಗೌರವ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.
ಸಮಾರAಭದಲ್ಲಿ ಪ್ರಥಮ ಕನ್ನಡ ಜಾನಪದ ಸಮ್ಮೇಳನಾಧ್ಯಕ್ಷÀ ಡಾ. ಸಿ. ಸೋಮಶೇಖರ್, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರು, ಮತ್ತು ಐ.ಸಿ.ಸಿ.ಆರ್. ಭಾರತದ ಸದಸ್ಯರಾದ ಡಾ. ಜಾನಪದ ಎಸ್. ಬೆಂಗಳೂರು ಗೋವಿಂದ ರಾಜನಗರ ವಿಧಾನ ಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷÀ ಬಾಲಾಜಿ ನರಸಿಂಹ ಮೂರ್ತಿ, ಬೆಂಗಳೂರು ಕೇಂದ್ರ ಜಿಲ್ಲೆಯ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ರಿಯಾಜ್ ಪಾಷಾ, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಮೊದಲಾದ ಸಂಘ-ಸAಸ್ಥೆಗಳಲ್ಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರ ವತಿಯಿಂದ ಸೇವೆಯನ್ನು ಗುರುತಿಸಿ ೨೦೨೦ರಲ್ಲಿ ಕೊಡಗು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ೨೦೨೪ರಲ್ಲಿ, ಸ್ನೇಹ ಸಿರಿ ಬಳಗ ಕೊಡಗು "ಶಿಕ್ಷಕ ಸಿರಿ" ಪ್ರಶಸ್ತಿಯನ್ನು ನೀಡಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ ೨೦೨೪ರಲ್ಲಿ ಹಾಸನ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟಿçÃಯ ಹಬ್ಬಗಳ ಆಚರಣೆಯ ಸಮಿತಿ, ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ಗೌರವ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.
ಸಮಾರAಭದಲ್ಲಿ ಪ್ರಥಮ ಕನ್ನಡ ಜಾನಪದ ಸಮ್ಮೇಳನಾಧ್ಯಕ್ಷÀ ಡಾ. ಸಿ. ಸೋಮಶೇಖರ್, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರು ಮತ್ತು ಐ.ಸಿ.ಸಿ.ಆರ್. ಭಾರತದ ಸದಸ್ಯ ಡಾ. ಜಾನಪದ ಎಸ್. ಬೆಂಗಳೂರು ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷÀ ಬಾಲಾಜಿ ನರಸಿಂಹ ಮೂರ್ತಿ, ಬೆಂಗಳೂರು ಕೇಂದ್ರ ಜಿಲ್ಲೆಯ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ರಿಯಾಜ್ ಪಾಷಾ, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.