ಕೂಡಿಗೆ, ಜೂ. ೨೯: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯ ೨೦೨೪-೨೫ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ನೋಡಲ್ ಅಧಿಕಾರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕ ದಿನೇಶ್ ವಿ.ಡಿ. ಗ್ರಾಮ ಪಂಚಾಯಿತಿ ಮತ್ತು ಇತರೆ ಇಲಾಖೆಗಳು ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಮತ್ತು ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು.

ತಾಲೂಕು ಪಂಚಾಯಿತಿಯಿAದ ಕಳೆದ ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ತಾಲೂಕು ಪಂಚಾಯಿತಿಯಿAದ ಕೈಗೊಂಡ ಕಾಮಗಾರಿಗಳ ಬಗ್ಗೆ ವಿವರ ನೀಡಲು ಸಂಬAಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿಲ್ಲದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ತೆಗೆದುಕೊಳ್ಳ ಬಹುದಾದ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಆರ್. ಲತಾಬಾಯಿ, ಉಪಾಧ್ಯಕ್ಷ ಬಸವರಾಜು, ಹೆಚ್.ಎಸ್. ಸದಸ್ಯರುಗಳಾದ ಧರ್ಮಪ್ಪ ಎನ್.ಎನ್., ಪ್ರದೀಪ್ ಎಸ್.ಎ., ಸರಿತಾ ಡಿ.ಎಸ್., ಭಾಗೀರಥಿ ಬಿ.ಹೆಚ್., ಲಕ್ಷಿö್ಮ, ನರೇಗಾ ತಾಂತ್ರಿಕ ಸಹಾಯಕರಾದ ಕಾರ್ತಿಕ್, ಸಾಮಾಜಿಕ ಲೆಕ್ಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ವಿಕ್ರಮ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ.ಸಿ. ರವಿ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಹೇಮಲತಾ ವಂದಿಸಿದರು.