*ಸಿದ್ದಾಪುರ, ಜೂ. ೩೦ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ೨೦೨೫-೨೬ ನೇ ಸಾಲಿನ ಪೂರ್ವ ಪ್ರಾಥಮಿಕ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ನೆಲ್ಲಿಹುದಿಕೇರಿಯ ಎಂ.ಜಿ. ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಂಜುAಡಸ್ವಾಮಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆನ್ನುವ ಉದ್ದೇಶದಿಂದ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಯೋಜನೆಗಳನ್ನು ಕಲ್ಪಿಸುತ್ತಿದ್ದು, ಇದನ್ನು ಸದುಯೋಗಪಡಿಸಿಕೊಳ್ಳ ಬೇಕು ಎಂದರು. ಹೊಸ ಪಟ್ಟಣ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಮುನ ಮಾತನಾಡಿ, ಪೂರ್ವ ಪ್ರಾಥಮಿಕ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಸ್ವಾಗತಿಸಿ ವಂದಿಸಿದರು. ಗ್ರಾ.ಪಂ. ಅಧ್ಯಕ್ಷೆ ಧನಲಕ್ಷಿö ಉಪಾಧ್ಯಕ್ಷೆ ಪ್ರಮೀಳ, ಸದಸ್ಯರುಗಳಾದ ಮುಸ್ತಫ, ಆಶಿಫ, ಹಕ್ಕೀಂ, ಅಂಗನವಾಡಿ ಕಾರ್ಯಕರ್ತೆಯರಾದ ಶಕುಂತಲಾ, ರಂಲ, ಸತ್ಯ, ಭುವನೇಶ್ವರಿ, ದಮಯಂತಿ, ಪೋಷಕ ವೃಂದÀ, ಗ್ರಾಮಸ್ಥರು ಹಾಗೂ ಪುಟಾಣಿಗಳು ಹಾಜರಿದ್ದರು.