ಶ್ರೀಮಂಗಲ, ಜೂ. ೩೦: ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಸೋಮವಾರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದ್ದು, ಕೇಂದ್ರಕ್ಕೆ ತೆರಳಿದ ಶಾಸಕರು ಅಲ್ಲಿಯ ಜನರ ಕ್ಷೇಮವನ್ನು ವಿಚಾರಿಸುತ್ತ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸದ್ಯದಲ್ಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭದಲ್ಲಿ ನಿವಾಸಿಗಳಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ಪಕ್ಷದ ಪ್ರಮುಖರು, ತಹಶೀಲ್ದಾರ್ ಮೋಹನ್ ಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.