ಮಡಿಕೇರಿ ಜೂ.೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ಯು ತಾ. ೨ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕÀ ಡಾ. ಮಂತರ್ ಗೌಡ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಗಾಳಿಬೀಡು ಜವಹಾರ್ ನವೋದಯ ವಿದ್ಯಾಲಯದ ಉಪನ್ಯಾಸಕ ಮಾರುತಿ ದಾಸಣ್ಣವರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.