ಮಡಿಕೇರಿ, ಜೂ.೩೦: ಮಡಿಕೇರಿಯ ಸಂತ ಮೈಕಲರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದAತಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪವಿತ್ರ ಗ್ರಂಥಗಳ ವಾಚನ ನೆರವೇರಿತು. ವಿದ್ಯಾಸಂಸ್ಥೆಯ ಸಂಚಾಲಕ ಸಂಜಯ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ದರು.
ಉಪನ್ಯಾಸಕ ಕೆ.ಪಿ. ಗಣೇಶ್ ಅವರು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಾವಳಿಗಳ ಕುರಿತು ತಿಳಿಸಿದರು. ಉಪನ್ಯಾಸಕಿ ಪಿ.ಡಿ. ಗಾನವಿ, ಸಂತ ಮೈಕಲರ ಕಾಲೇಜಿನ ಹಿನ್ನೆಲೆ ಹಾಗೂ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸಾಧನೆಯ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕಿ ರೇಖಾ ವಿದ್ಯಾರ್ಥಿಗಳ ಜೀವನದಲ್ಲಿ ಮೌಲ್ಯಗಳ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲೆ ಪಂಕಜ ಸ್ವಾಗತಿಸಿ, ಉಪನ್ಯಾಸಕಿ ಗಾನ ಮುದ್ದಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.