ಚೆಯ್ಯAಡಾಣೆ, ಜೂ. ೩೦: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಕೋಕೇರಿ, ಚೇಲಾವರ, ನರಿಯಂದಡ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಮನೆಯಂಗಳಕ್ಕೆ ಲಗ್ಗೆ ಇಡುತ್ತಿದ್ದು ಜನರು ಭಯಭೀತರಾಗಿದ್ದಾರೆ. ಅಲ್ಲದೆ ಗ್ರಾಮಗಳ ತೋಟಗಳಿಗೆ ನುಸುಳುತ್ತಿರುವ ಕಾಡಾನೆಗಳ ಹಿಂಡು ತೋಟದಲ್ಲಿರುವ ಫಸಲು ಭರಿತ ಕೃಷಿ ಗಿಡಗಳನ್ನು ತುಳಿದು ನಾಶಪಡಿಸುತ್ತಿದ್ದು ಬೆಳೆಗಾರರು ಅಪಾರ ನಷ್ಟ ಅನುಭವಿಸುವಂತಾಗಿದೆ.
ನರಿಯAದಡ ಗ್ರಾಮದ ನಿವಾಸಿ ಬೆಳೆಗಾರ ಶ್ಯಾನ್‌ಬೋಗರ ಸುಮಂತ್ ಅವರ ಮನೆಯ ಸಮೀಪಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಗಿಡಗಳನ್ನು ಹಾನಿಪಡಿಸಿದ್ದು ತೋಟಕ್ಕೆ ನುಸುಳಿ ಕಾಫಿ,ಅಡಿಕೆ, ಬಾಳೆ ತೆಂಗು ಇನ್ನಿತರ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿ ಅಪಾರ ನಷ್ಟ ಉಂಟುಮಾಡಿದೆ.
ಅಲ್ಲದೆ ಇದೇ ವ್ಯಾಪ್ತಿಯ ವಿವಿಧ ಗ್ರಾಮಗಳ ತೋಟಗಳಿಗೆ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು ದಾಳಿ ನಡೆಸಿ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿದೆ. ಒಂದು ಗುಂಪಿನಲ್ಲಿ ೮ಕ್ಕೂ ಅಧಿಕ ಕಾಡಾನೆಗಳು ನಿರಂತರವಾಗಿ ಹಾವಳಿ ನಡೆಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ವಹಿಸಿದ್ದಾರೆಂದು ಸುಮಂತ್ ಆರೋಪಿಸಿದ್ದಾರೆ.
ಕೂಡಲೇ ಸಂಬAಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಸೆರೆ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. -ಅಶ್ರಫ್