ಮಡಿಕೇರಿ, ಜೂ. ೩೦: ನಿಯಂತ್ರಣ ಕಳೆದುಕೊಂಡ ಸರಕಾರಿ ಬಸ್ ಬರೆಗೆ ಗುದ್ದಿದ ಘಟನೆ ಕೊಡಗು-ದಕ್ಷಿಣ ಕನ್ನಡ ಗಡಿಭಾಗವಾದ ಕಲ್ಲುಗುಂಡಿಯಲ್ಲಿ ನಡೆದಿದೆ.
ಮಂಗಳೂರಿನಿAದ ಮಡಿಕೇರಿಯತ್ತ ಬರುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಬರೆಗೆ ಗುದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಂತರ ಪೊಲೀಸರು ಆಗಮಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.