ವೀರಾಜಪೇಟೆ, ಜು. ೧: ರಾಜ್ಯದ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಇ-ವ್ಯವಹಾರವನ್ನು (ಕಾಗದರಹಿತ ಆಡಳಿತ) ಪ್ರೋತ್ಸಾಹಿಸಲು, ಉಚಿತ ಲ್ಯಾಪ್ಟಾಪ್ಅನ್ನು ರಾಜ್ಯ ಸರಕಾರ ಒದಗಿಸುತ್ತಿದೆ. ಇದರ ಭಾಗವಾಗಿ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕ್ಷೇತ್ರದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.
ಈ ಸಂದರ್ಭ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್, ವೀರಾಜಪೇಟೆ ತಹಶೀಲ್ದಾರ್ ಅನಂತ್ ಶಂಕರ, ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವಿವಿಧ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.