ಮಡಿಕೇರಿ, ಜು. ೧: ಕೇಂದ್ರ ಸರ್ಕಾರದಿಂದ ‘ಮಿಷನ್ ಶಕ್ತಿ’ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ “ಜಿಲ್ಲಾ ಮಹಿಳಾ ಸಬಲೀಕರಣ ಘಟಕ” ಹಾಗೂ “ಸಖಿ ಒನ್ ಸ್ಟಾಫ್ ಸೆಂಟರ್” ನಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಲಿ ಇರುವ ಹುದ್ದೆಗಳಿಗೆ ವಿದ್ಯಾರ್ಹತೆ ನಿಗದಿಪಡಿಸಿ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಡಿಇ.ಒ. ಮತ್ತು ಪ್ರೋಗ್ರಾಮ್ ಅಸಿಸ್ಟೆಂಟ್ ಫಾರ್ ಪಿ.ಎಂ.ಎA.ವಿ.ವೈ. (೧ ಹುದ್ದೆ), ಐ.ಟಿ./ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ೩ ವರ್ಷದ ಡಾಟಾ ಮ್ಯಾನೇಜ್‌ಮೆಂಟ್, ಟೈಪಿಂಗ್ ತಿಳಿದಿರಬೇಕು.
ಸ್ವೀಪರ್/ಗಾರ್ಡ್ ಫಾರ್ ಸಖಿ ಒನ್ ಸ್ಟಾಪ್ ಸೆಂಟರ್(೧ ಹುದ್ದೆ) ಮಡಿಕೇರಿ ೨೪/೭ (ಹಗಲು ಮತ್ತು ರಾತ್ರಿ ಸಿಪ್ಟ್), ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ೨ ವರ್ಷದ ಅನುಭವ ಹೊಂದಿರಬೇಕು.
ಪಾರಾಲೀಗಲ್ ಪರ್ಸನಲ್/ಲಾಯರ್ (೧ ಹುದ್ದೆ) ಕಾನೂನು ಪದವಿ ಪಡೆದಿರಬೇಕು (೨-೩ ವರ್ಷದ ಅನುಭವ). ಅರ್ಜಿ ಸಲ್ಲಿಸಲು ತಾ. ೭ ಕೊನೆಯ ದಿನವಾಗಿದೆ. ಸಂದರ್ಶನದ ದಿನಾಂಕ ನಂತರ ತಿಳಿಸಲಾಗುವುದು.
ಪ್ರತ್ಯೇಕ ಹುದ್ದೆಗೆ ಪ್ರತ್ಯೇಕ ಅರ್ಜಿ ಸಲ್ಲಿಸುವುದು. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ “ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ-೫೭೧೨೦೧” ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಅವಧಿ ಮೀರಿ ಸಲ್ಲಿಸಿದ ಅರ್ಜಿ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ೦೮೨೭೨-೨೨೮೦೧೦ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಚರ್ಮೋದ್ಯೋಮದಲ್ಲಿ ತರಬೇತಿಗೆ
ಮಡಿಕೇರಿ, ಜು. ೧: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ ೨೦೨೫-೨೬ನೇ ಸಾಲಿಗೆ ಪರಿಶಿಷ್ಟ ಜಾತಿಯ ಮಾದಿಗ, ಸಮಗಾರ, ಡೋರ, ಮೋಚಿ, ಮೋಚಿಗಾರ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳ ಕುಟುಂಬದ ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಪಡೆದಿರುವವರಿಗೆ ಚರ್ಮೋದ್ಯೋಮದಲ್ಲಿ ಹೊಸ ತಂತ್ರಜ್ಞಾನ, ವಿನ್ಯಾಸಶÀ ಮತ್ತು ಮಾರುಕಟ್ಟೆ ಕುರಿತು ತರಬೇತಿಗೆ ದೆಹಲಿ, ತಮಿಳುನಾಡು, ಮಹಾರಾಷ್ಟç, ಉತ್ತರಪ್ರದೇಶ, ಪಶ್ಚಿಮ ಬಂಗಾಳಕ್ಕೆ ನಿಗಮದ ವತಿಯಿಂದಿ ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ. ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ವಸತಿ ಹಾಗೂ ಶಿಷ್ಯವೇತನ ನೀಡಲಾಗುವುದು.
ಆಸಕ್ತರು ತಾ. ೫ ರೊಳಗೆ ನಗರದ ಲಿಡ್ಕರ್ ಕಚೇರಿಗೆ ಭೇಟಿ ನೀಡಿ ಸೂಕ್ತ ದಾಖಲಾತಿಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕರು ಲಿಡ್ಕರ್ ಕೂಡಗು ಜಿಲ್ಲೆ ಮೊ. ಸಂಖ್ಯೆ: ೯೭೪೧೮೩೩೩೦೭, ೭೭೯೫೬೦೩೨೪೭ ನ್ನು ಸಂಪರ್ಕಿಸಬಹುದು ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಸಂಶೋಧನಾ ಪ್ರಬಂಧ ಫೆಲೋಶಿಫ್‌ಗೆ
ಮಡಿಕೇರಿ, ಜು. ೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ ವಿಚಾರ, ಜಾನಪದ ಹಾಗೂ ಕಲೆಗೆ ಸಂಬAಧಿಸಿದ ಸಂಶೋಧನಾ ಪ್ರಬಂಧಕ್ಕೆ ಫೆಲೋಶಿಫ್ ನೀಡಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪದವೀಧರರು ಫೆಲೋಶಿಫ್‌ಗಾಗಿ ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ಬಂದಿರುವ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ ನಾಲ್ಕು ಸೂಕ್ತ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ತಲಾ ರೂ. ೭೫,೦೦೦ ದಂತೆ ಫೆಲೋಶಿಫ್ ನೀಡಲಾಗುವುದು. ಈ ಹಿಂದೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿದವರಿಗೆ ಅವಕಾಶ ಇರುವುದಿಲ್ಲ. ಫೆಲೋಶಿಫ್‌ಗೆ ಆಯ್ಕೆಯಾದವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೀತಿ ನಿಯಮಾವಳಿಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ರಿಜಿಸ್ಟಾçರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ.ಸಂ: ೦೮೨೭೨- ೨೨೩೦೫೫, ೬೩೬೨೫೨೨೬೭೭ ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ತಿಳಿಸಿದ್ದಾರೆ.
ಕೃಷಿ ಯಂತ್ರೋಪಕರಣಗಳಿಗೆ
ಮಡಿಕೇರಿ, ಜು. ೧: ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ. ೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿAದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ (ಆರ್.ಟಿ.ಸಿ.), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ. ೧೦೦ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಕಟಣೆ ಕೋರಿದೆ.
ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪೆçÃಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ. ೫೦ ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಯನ್ನು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.
ವಕೀಲ ಶಿಷ್ಯವೇತನಕ್ಕೆ
ಮಡಿಕೇರಿ, ಜು. ೧: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ. ೫೦೦೦ಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೦೨೧೪ ಹಾಗೂ ಇಲಾಖಾ ವೆಬ್‌ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ. gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.