ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆಗೆ ಅನುಮೋದನೆ

ಚಿಕ್ಕಬಳ್ಳಾಪುರ, ಜು. ೨: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಶೇಖ್ ಹಸೀನಾಗೆ ಜೈಲು ಶಿಕ್ಷೆ

ಢಾಕಾ, ಜು. ೨: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟಿçÃಯ ಅಪರಾಧ ನ್ಯಾಯ ಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಅಪರಾಧ ನ್ಯಾಯಮಂಡಳಿ ಈ ತೀರ್ಪು ನೀಡಿದೆ. ಇದೇ ತೀರ್ಪಿನಲ್ಲಿ, ಗೈಬಂಧದ ಗೋಬಿಂದಗAಜ್‌ನ ಶಕಿಲ್ ಅಕಂದ್ ಬುಲ್ಬುಲ್‌ಗೆ ನ್ಯಾಯ ಮಂಡಳಿ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಶೇಖ್ ಹಸೀನಾ ಅವರು ೧೧ ತಿಂಗಳ ಹಿಂದೆ ಅಧಿಕಾರ ತೊರೆದು ದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಬಾರಿ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು ಪ್ರಶ್ನಿಸಿ ಮೇಲ್ಮನವಿ

ಬೆಂಗಳೂರು, ಜು. ೨: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ದುರ್ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತ್ತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿರುವ ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾದರು. ಮೇಲ್ಮನವಿಗೆ ಸಂಬAಧಿಸಿದAತೆ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜುಲೈ ೩ ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು.

ಪ್ರವಾಹ : ಮೃತರ ಸಂಖ್ಯೆ ೧೦ಕ್ಕೆ ಏರಿಕೆ

ಶಿಮ್ಲಾ, ಜು. ೨: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹ ಸಂಬAಧಿತ ಘಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ ೧೦ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ. ನಾಪತ್ತೆಯಾದ ೩೪ ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಮಂಗಳವಾರದAದು ರಾಜ್ಯದಲ್ಲಿ ೧೧ ಮೇಘಸ್ಫೋಟ, ನಾಲ್ಕು ದಿಢೀರ್ ಪ್ರವಾಹ ಹಾಗೂ ಭೂಕುಸಿತ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸಿದ್ದವು. ಇವುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂಡಿ ಜಿಲ್ಲೆಯಲ್ಲೇ ಅನಾಹುತಗಳು ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿವೆ. ಗೌಹರ್‌ನಲ್ಲಿ ನಾಲ್ಕು, ಕರ್‌ಸೋಗ್‌ನಲ್ಲಿ ಮೂರು, ಧರಂಪುರದಲ್ಲಿ ಎರಡು ಮತ್ತು ಥನಾಗ್ ಹಾಗೂ ಮಂಡಿಯಲ್ಲಿ ತಲಾ ಒಂದು ಮೇಘಸ್ಪೋಟಗಳು ವರದಿಯಾಗಿವೆ.

ನಾಲ್ವರು ಉಗ್ರರ ಬಂಧನ

ಇAಫಾಲ, ಜು. ೨: ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಗಳ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ನಿಷೇಧಿತ ಸಂಘಟನೆ ಝಲಿಯಾಂಗ್‌ರಾAಗ್ ಯುನೈಟೆಡ್ ಫ್ರಂಟ್‌ನ ಸ್ವಯಂ ಘೋಷಿತ ಉಪ ಮುಖ್ಯಸ್ಥ ನಮ್‌ಕುಂಗ್ ಕಮೇ (೪೨) ಅವರನ್ನು ಪಶ್ಚಿಮ ಇಂಫಾಲದ ಕೆಕೃಪತ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಿಷೇಧಿತ ಸಂಘಟನೆಯಾದ ಕೆವೈಕೆಎಲ್‌ನ (ಸೊರೆಪಾ) ಉಗ್ರನನ್ನು ಪೂರ್ವ ಇಂಫಾಲ ಜಿಲ್ಲೆಯ ಆಂಡ್ರ ಖುಮಾನ್‌ನಲ್ಲಿ ಬಂಧಿಸಲಾಗಿದೆ. ನಿಷೇಧಿತ ಸಂಘಟನೆಯಾದ ಕೆಸಿಪಿ (ಪಿಡಬ್ಲ್ಯೂಜಿ) ಉಗ್ರನನ್ನು ಖುರೈ ಚೈತಾಬಿ ಲೀರಾಕ್‌ನಿಂದ ಹಾಗೂ ಖುರೈ ಕೊಂಗ್‌ಖಾಮ್ ಲೈಕೈನಿಂದ ಮತ್ತೊಬ್ಬ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯದಲ್ಲಿ ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿAದ ೯ ಎಂಎA ಪಿಸ್ತೂಲ್‌ಗಳು, ಮ್ಯಾಗಜೀನ್, ರೈಫಲ್‌ಗಳು, ಗ್ರೆನೇಡ್‌ಗಳು, ಮದ್ದುಗುಂಡುಗಳನ್ನು ಸೇರಿದಂತೆ ಶಸ್ತಾçಸ್ತçಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.