ಮಡಿಕೇರಿ, ಜು. ೨: ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ೨.೦ ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ/ ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ hಣಣಠಿs/ಠಿmಚಿಥಿ.uಡಿbಚಿಟಿ.gov.iಟಿ ದಲ್ಲಿ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವೀರಾಜಪೇಟೆ ಪುರಸಭೆ ಹಾಗೂ ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡುಗಳಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಪಡೆಯಲು ತಾ. ೧೫ ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ನಿಗಧಿತ ನಮೂನೆಯಲ್ಲಿ ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಗೆ ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನ, ಕಚ್ಚಾ ಮನೆಯ ದಾಖಲೆಗಳ ಪ್ರತಿಗಳನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಯನ್ನು ಸಂಪರ್ಕಿಸುವAತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.