ಮಡಿಕೇರಿ, ಜು. ೩: ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿನಿ ಶೈಲಜಾ ೯.೫೫ ಸಿಜಿಪಿಎ ಅಂಕಗಳೊAದಿಗೆ ೨೦೨೧-೨೫ನೇ ಶೈಕ್ಷಣಿಕ ಸಾಲಿನ ವಿಟಿಯು ಇಂಜಿನಿಯರಿAಗ್ ಪದವಿಯಲ್ಲಿ ರಾಜ್ಯ ಮಟ್ಟದಲ್ಲಿ ೩ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಅವರ ಮುಂದಾಳತ್ವದಲ್ಲಿ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಬಿ.ಬಿ. ಹಾಗೂ ಅಧ್ಯಾಪಕರ ಸಮರ್ಥ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ವಿದ್ಯಾರ್ಥಿನಿ ಶೈಲಜಾ ಅವರ ಈ ಸಾಧನೆ ಬಗ್ಗೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ, ಉಪಾಧ್ಯಕ್ಷÀ ಕೆ.ಎಂ. ಚಿಣ್ಣಪ್ಪ, ಕಾರ್ಯದರ್ಶಿ ರಾಕೇಶ್ ಪೂವಯ್ಯ, ನಿರ್ದೇಶಕರುಗಳು, ಕಾಲೇಜಿನ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.