ಮಡಿಕೇರಿ, ಜು. ೩: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ ರೂ. ೨ ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತÀ ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ.
ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸುವಂತಾಗಬೇಕು ಎಂದು ಹೇಳಿದರು.
ಎಲ್ಲರ ಸಹಕಾರದಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ಜಿಲ್ಲಾಡಳಿತ ಸಹ ಸಂಪೂರ್ಣ ಸಹಕಾರ ನೀಡುತ್ತಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಿರ್ಮಾಣಕ್ಕೆ ನಿರಾಪೇಕ್ಷಣಾ ಪತ್ರ ಸಹ ನೀಡಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ೮ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಮತ್ತಷ್ಟು ಹೆಚ್ಚಿಸುವಂತಾಗಬೇಕು. ಜೊತೆಗೆ ಶಿಕ್ಷಕರು ಸಹ ಸಹಕಾರ ನೀಡುವಂತಾಗಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತÀ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಆದಿವಾಸಿ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸಂಬAಧ ಜಾಗೃತಿ ಮೂಡಿಸಲಾಗುತ್ತದೆ ಎಂದರು.