ಕೂಡಿಗೆ, ಜು. ೪: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಈಗಾಗಲೇ ೧೬ನೇ ಹಣಕಾಸು ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆ ಅನುಗುಣವಾಗಿ ಎಲ್ಲಾ ವಾರ್ಡ್ಗಳಲ್ಲಿ ಅತಿ ಮುಖ್ಯವಾದ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ಅನುಮೋದನೆಯ ಅನುಸಾರವಾಗಿ ಹಣ ಬಿಡುಗಡೆಯಾದಲ್ಲಿ ಕಾಮಗಾರಿಯನ್ನು ಆರಂಭಿಸುವ ಸಂಬAಧ ಸಭೆಯಲ್ಲಿ ಚರ್ಚೆಗಳು ನಡೆದವು.
ಅವುಗಳನ್ನು ಅತಿ ಶೀಘ್ರವಾಗಿ ಪೂರ್ಣಗೊಳಿಸುವ ವಿಷಯಗಳ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಸತಿ ಗೃಹ ನಿರ್ಮಾಣ ಮಾಡುವ ಮಾಲೀಕರು ತಮ್ಮ ಲೇಔಟ್ಗಳಲ್ಲಿ ಸಮರ್ಪಕವಾಗಿ ನಿಯಮಾನುಸಾರ ಮೂಲಭೂತ ಸೌಕರ್ಯಗಳನ್ನು ಅಲ್ಲಿನ ನಿವಾಸಿಗಳಿಗೆ ಒದಗಿಸುವ ಕಾರ್ಯವನ್ನು ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ರಹಿತ ಗ್ರಾಮಸ್ಥರಿಗೆ ವಸತಿ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆದವು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡಿ, ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಷಯಗಳನ್ನು ಹಂತ ಹಂತವಾಗಿ ಕಾರ್ಯಗತಗೊಳಿಸಲು ಕ್ರಮ ವಹಿಸಲಾಗುವುದು. ಅಲ್ಲದೆ, ಶುಚಿತ್ವ ಮತ್ತು ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ವಹಿಸಲಾಗುವುದು. ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ರಚಿಸಲಾದ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ನಿರ್ವಹಿಸಲಾಗುವುದು ಎಂದರು.
ನAತರ ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದು ವಿಲೇವಾರಿ ಮಾಡಲಾಯಿತು. ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರದ ಹೊಸ ಯೋಜನೆಯ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷೆ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.