ಮಡಿಕೇರಿ, ಜು. ೪: ಸಮಾಜ ಕಲ್ಯಾಣ ಇಲಾಖಾ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಇಲಾಖಾ ವೆಬ್‌ಸೈಟ್: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ೪೦ ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ೩ ಅಥವಾ ೫ ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ ೨೦ ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.

ತರಬೇತಿ ಅವಧಿಯು ೨ ವರ್ಷಗಳಾಗಿದ್ದು, ಮಾಸಿಕ ರೂ. ೧೦,೦೦೦ ಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. ೨,೫೦,೦೦೦ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ. ೧೦ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ ೩ ವರ್ಷದೊಳಗಾಗಿ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೊಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‌ರೋಲ್‌ಮೆಂಟ್ ಫೀಯನ್ನು ನೀಡತಕ್ಕದ್ದು. ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯ ವೇತವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯಥಿಗಳಿಗೆ ೧೩೫ ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (೨ ವರ್ಷಗಳ ತರಬೇತಿಗೆ ೧ ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರು ಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬAಧಿಸಿದ ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ ೯೪೮೦೮೪೩೦೩೭, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ೯೪೮೦೮೪೩೧೫೫, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ೯೪೮೦೮೪೩೧೫೬ ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ ೯೪೮೦೮೪೩೧೫೭ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.