ಮಡಿಕೇರಿ, ಜು. ೪: ಸರ್ಕಾರದ ಸುತ್ತೋಲೆಯಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬAಧ ಅರ್ಜಿಗಳನ್ನು ಸ್ವೀಕರಿಸಲು ತಾ. ೧೫ ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಸರ್ಕಾರಿ ಜಮೀನಿನಲ್ಲಿ ಬೆಳೆಯುತ್ತಿರುವ ಪ್ಲಾಂಟೇಷನ್ ಬೆಳೆಗಳ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬAಧ ಅರ್ಜಿಯನ್ನು ತಹಶೀಲ್ದಾರರ ಕಚೇರಿಯಲ್ಲಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿದಾರರು ಸಂಬAಧಪಟ್ಟ ತಹಶೀಲ್ದಾರರ ಕಚೇರಿಗಳಲ್ಲಿ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಿದೆ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ಪಡೆಯಲು ಬಯಸುವ ಅರ್ಹ ಅರ್ಜಿದಾರರು ನಿಗಧಿತ ನಮೂನೆಯಲ್ಲಿ ತಾ. ೧೫ ರೊಳಗೆ ಸಂಬAಧಪಟ್ಟ ತಹಶೀಲ್ದಾರರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದ್ದಾರೆ.