ಆಪರೇಷನ್ ಸಿಂಧೂರ್' ವೇಳೆ ಪಾಕ್‌ಗೆ ಚೀನಾ ಬೆಂಬಲ

ನವದೆಹಲಿ, ಜು. ೪: ‘ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ಹೇಗೆಲ್ಲಾ ನೆರವು ನೀಡಿದವು ಎಂಬುದನ್ನು ಲೆಫ್ಟಿನೆಂಟ್ ಜನರಲ್ ರಾಹುಲ್ ಆರ್ ಸಿಂಗ್ ಶುಕ್ರವಾರ ವಿವರಿಸಿದ್ದಾರೆ. ಭಾರತಕ್ಕೆ ತೊಂದರೆ ನೀಡುವ ಸಲುವಾಗಿ ಪಾಕಿಸ್ತಾನವನ್ನು ಬಳಸಿಕೊಂಡ ಚೀನಾ ನಾಲ್ಕು ದಿನಗಳ ಭಾರತ-ಪಾಕಿಸ್ತಾನ ಸೇನಾ ಸಂಘರ್ಷದ ಸಂದರ್ಭದಲ್ಲಿ ಸಾಧ್ಯವಿರುವ ಎಲ್ಲಾ ನೆರವು ನೀಡಿತ್ತು ಎಂದು ತಿಳಿಸಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್ ಜನರಲ್, ವಿವಿಧ ಶಸಾಸ್ತçಗಳನ್ನು ಪರೀಕ್ಷಿಸಲು ಭಾರತ ಮತ್ತು ಪಾಕ್ ಸಂಘರ್ಷವನ್ನು "ಲೈವ್ ಲ್ಯಾಬ್" ರೀತಿ ಬಳಸಿಕೊಂಡ ಚೀನಾ, ಪಾಕಿಸ್ತಾನಕ್ಕೆ ಲೈವ್ ಅಪ್‌ಡೇಟ್ ನೀಡುತಿತ್ತು ಎಂದು ಹೇಳಿದರು. ನಮಗೆ ಒಂದು ಗಡಿ ಮತ್ತು ಇಬ್ಬರು ಎದುರಾಳಿಗಳಿದ್ದರು, ವಾಸ್ತವವಾಗಿ ಮೂವರಿದ್ದರು. ಎದುರಾಳಿಯಾಗಿದ್ದ ಪಾಕಿಸ್ತಾನಕ್ಕೆ ಚೀನಾ ಎಲ್ಲಾ ರೀತಿಯ ಬೆಂಬಲ ನೀಡುತ್ತಿತ್ತು. ಪಾಕಿಸ್ತಾನದ ಶೇ. ೮೧ ರಷ್ಟು ಮಿಲಿಟರಿ ಸರಕುಗಳು ಚೀನಾದವು. ಇತರ ಶಸ್ತಾçಸ್ತçಗಳೊಂದಿಗೆ ತನ್ನ ಶಸ್ತಾçಸ್ತçಗಳನ್ನು ಪರೀಕ್ಷಿಸಲು ಚೀನಾಕ್ಕೆ ಸೇನಾ ಸಂಘರ್ಷ ಲೈವ್ ಲ್ಯಾಬ್‌ನಂತಿತ್ತು ಎಂದರು.

ಐಪಿಎಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಶಿಫಾರಸು

ಬೆಂಗಳೂರು, ಜು. ೪: ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಲೋಕಾಯುಕ್ತದ ಮಾಜಿ ಎಸ್.ಪಿ. ಐಪಿಎಸ್ ಅಧಿಕಾರಿ ಶ್ರೀನಾಥ್ ಮಹಾದೇವ ಜೋಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಶಿಫಾರಸು ಮಾಡಿದ್ದಾರೆ. ವಜಾಗೊಂಡ ಹೆಡ್ ಕಾನ್‌ಸ್ಟೇಬಲ್ ನಿಂಗಪ್ಪ ಅವರೊಂದಿಗೆ ಐಪಿಎಸ್ ಅಧಿಕಾರಿ ಶಾಮೀಲಾಗಿದ್ದಾರೆ ಮತ್ತು ಅಖಿಲ ಭಾರತ ಸೇವೆಗಳ (ನಡತೆ) ನಿಯಮಗಳು, ೧೯೬೮ ಅನ್ನು ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಅಕ್ರಮ ಹಣ ಸಂಪಾದನೆಗಾಗಿ ಜೋಶಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಸಂಗ್ರಹಿಸುವ ಬಗ್ಗೆ ಅವರ ನಡುವಿನ ಸಂಭಾಷಣೆಯ ಆಡಿಯೋ ತುಣುಕುಗಳಿವೆ ಮತ್ತು ಸಂಗ್ರಹಿಸಿದ ಲಂಚದ ಕಪ್ಪು ಹಣವನ್ನು ವೈಟ್ ಮನಿಯಾಗಿಸಲು ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡಲು ಬಳಸಲಾಗಿದೆ ಎಂದು ಲೋಕಾಯುಕ್ತರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದಳಪತಿ ವಿಜಯ್ ಸಿಎಂ ಅಭ್ಯರ್ಥಿ

ತಮಿಳುನಾಡು, ಜು. ೪: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಿಎಂ ಅಭ್ಯರ್ಥಿಯನ್ನು ಘೋಷಿಸಿದೆ. ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಘೋಷಿಸಿದೆ. ಈ ಸಂಬAಧ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಶೇಷ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ. ಅಲ್ಲದೇ ಮುಂದಿನ ತಿಂಗಳು ಬೃಹತ್ ಸಮಾವೇಶ ಆಯೋಜಿಸಲು ಪ್ರಸ್ತಾಪಿಸಲಾಗಿದೆ. ಪಕ್ಷದ ಸಿದ್ಧಾಂತವನ್ನು ಜನರಿಗೆ ತಲುಪಿಸಲು ಹಳ್ಳಿಗಳಲ್ಲಿ ಸಾರ್ವಜನಿಕ ಸಭೆ ಆಯೋಜಿಸಲು ಪಕ್ಷ ನಿರ್ಧರಿಸಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಡಿಎಂಕೆ ಅಥವಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ತಮಿಳುನಾಡಿನಲ್ಲಿ ಬೆಳೆಯಲು ಸಾಧ್ಯವಿಲ್ಲ ಎಂದು ವಿಜಯ್ ಹೇಳಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಡಿಎಂಕೆ ಅಥವಾ ಎಐಎಡಿಎಂಕೆ ರೀತಿಯ ಪಕ್ಷ ಅಲ್ಲ. ನಾವು ಟಿವಿಕೆ ಎಂದು ವಿಜಯ್ ಹೇಳಿದ್ದು, ಆ ಎರಡೂ ಪಕ್ಷಗಳಲ್ಲಿ ಇಲ್ಲದ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಣಯದಲ್ಲಿ ಒಪ್ಪಿಗೆ ನೀಡಲಾಗಿದೆ.

ಪತಿಯಿಂದಲೇ ಮಹಿಳಾ ಕೌನ್ಸಿಲರ್ ಬರ್ಬರ ಹತ್ಯೆ

ಚೆನ್ನೆöÊ, ಜು. ೪: ಚೆನ್ನೆöÊನ ಪಶ್ಚಿಮ ಉಪನಗರದಲ್ಲಿರುವ ತಿರುನಿಂದ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್ ಒಬ್ಬರನ್ನು ಅವರ ಪತಿಯೇ ಕೊಚ್ಚಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಸ್. ಗೋಮತಿ (೩೮) ಮೃತ ಕೌನ್ಸಿಲರ್, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪುರಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ವೈಯಕ್ತಿಕ ಕಾರಣಗಳಿಂದಾಗಿ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ಅವರ ಮನೆಯ ಬಳಿ ಆಕೆಯ ಪತಿ ಸ್ಟೀಫನ್ ರಾಜ್ ಹಲ್ಲೆ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಆಕೆ ಸಾವನ್ನಪ್ಪಿದ್ದರು. ಸ್ಟೀಪನ್ ರಾಜ್ ಪೊಲೀಸರ ಮುಂದೆ ಶರಣಾಗಿದ್ದಾರೆ.

ಕೇರಳದಲ್ಲಿ ಶಂಕಿತ ನಿಫಾ ವೈರಸ್ ಪ್ರಕರಣ ಪತ್ತೆ

ತಿರುವನಂತಪುರA, ಜು. ೪: ಕೇರಳದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಶುಕ್ರವಾರ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದ್ದಾರೆ. ಕೋಯಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ವೈರಸ್ ಕುರಿತಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಯಿಕ್ಕೋಡ್ ಮತ್ತು ಮಲಪ್ಪುರಂನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಿಯಮಿತ ಪರೀಕ್ಷೆಯ ಸಮಯದಲ್ಲಿ ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಂದ ಬಂದಿದ್ದ ಇಬ್ಬರಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳನ್ನು ಗುರುತಿಸಲಾಗಿದೆ. ದೃಢೀಕರಣಕ್ಕಾಗಿ ಪುಣೆಯ ರಾಷ್ಟಿçÃಯ ವೈರಾಲಜಿ ಸಂಸ್ಥೆಗೆ ಮಾದರಿಗಳನ್ನು ರವಾನಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯೋಗೇಂದ್ರ ಸಾವೊಗೆ ಸೇರಿದ ಜಾಗಗಳ ಮೇಲೆ ಇಡಿ ದಾಳಿ

ರಾಂಚಿ, ಜು. ೪: ಜಾರ್ಖಂಡ್‌ನ ಮಾಜಿ ಸಚಿವ ಯೋಗೇಂದ್ರ ಸಾವೊ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ನಡೆಯುತ್ತಿರುವ ಮರಳು ಅಕ್ರಮ ಗಣಿಗಾರಿಕೆ ಮತ್ತು ಸುಲಿಗೆ ಸಂಬAಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಜಾರ್ಖಂಡ್‌ನ ಹಲವು ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಜಾರಿಬಾಗ್ ಮತ್ತು ರಾಂಚಿಯಲ್ಲಿ ಕನಿಷ್ಟ ಎಂಟು ಸ್ಥಳಗಳ ಮೇಲೆ ಬೆಳಿಗ್ಗಿನನ ಜಾವದಿಂದ ದಾಳಿ ನಡೆಸಲಾಗಿದೆ. ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯ ನಿಬಂಧನೆಗಳ ಪ್ರಕಾರ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸುಲಿಗೆ, ಅಕ್ರಮ ಮರಳು ಗಣಿಗಾರಿಕೆ ಮತ್ತು ಭೂಕಬಳಿಕೆಯಂತಹ ಚಟುವಟಿಕೆಗಳ ಮೂಲಕ ಗಣನೀಯ ಆದಾಯವನ್ನು ಗಳಿಸಲಾಗಿದೆ ಎಂಬ ಆರೋಪದ ಹಿನ್ನೆಲೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕ ಸಾವೊ ಜಾರ್ಖಂಡ್‌ನ ಮಾಜಿ ಕೃಷಿ ಸಚಿವರಾಗಿದ್ದಾರೆ. ಅವರ ಮಗಳು ಶಾಸಕಿ ಅಂಬಾ ಪ್ರಸಾದ್ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ವರ್ಷ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು.