ಪೊನ್ನಂಪೇಟೆ, ಜು. ೪: ದಕ್ಷಿಣ ಕೊಡಗಿನ ಬಿ. ಶೆಟ್ಟಿಗೇರಿ ವ್ಯಾಪ್ತಿಯ ಕುಟ್ಟಂದಿ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ವಿಪರೀತ ಮಳೆಗೆ ಕಾಫಿ ಫಸಲು ಉದುರಲು ಪ್ರಾರಂಭವಾಗಿದೆ. ಈ ಬಗ್ಗೆ ಮಾತನಾಡಿದ ಚೇರಂಡ ಎಂ. ಕಿರಣ್, ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿ ಫಸಲು ಮಣ್ಣು ಪಾಲಾಗುತ್ತಿದೆ. ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಾರರಿಗೆ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.