ನಾಪೋಕ್ಲು, ಜು. ೫: ಬಿರುಸಿನ ಗಾಳಿ, ಮಳೆಯಿಂದ ಸಂಭವಿಸುವ ಅವಘಡಗಳನ್ನು ತಪ್ಪಿಸಲು ಸನ್ನದ್ಧರಾಗಿರಬೇಕು ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಪಿ.ಜಿ.ರಾಘವೇಂದ್ರ ಹೇಳಿದರು.
ಮಳೆಗಾಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಠಾಣೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪದಂತ ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಈಜುಗಾರರು, ಜೆಸಿಬಿ, ಕ್ರೇನ್ ಮಾಲೀಕರು ಮತ್ತು ಆಪರೇಟರ್‌ಗಳು, ಆ್ಯಂಬುಲೆನ್ಸ್ ಚಾಲಕರು ಮತ್ತು ಮಾಲೀಕರು, ಸ್ವಯಂಸೇವಕರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.