ಕೂಡಿಗೆ, ಜು. ೫ : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಧ್ಯಕ್ಷ ಸಿ.ಎಲ್. ವಿಶ್ವ ಚಾಲನೆ ನೀಡಿದರು.

ನಂಜರಾಯಪಟ್ಟಣ ಗ್ರಾಮದ ಗುಳಿಗ ಪೈಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಾಂಕೇತಿಕವಾಗಿ ಭೂಮಿಪೂಜೆ ನೆರವೇರಿಸಿ ಮಾತನಾಡಿದ ವಿಶ್ವ ಈ ಸಾಲಿನ ಕ್ರಿಯಾ ಯೋಜನೆಯಂತೆ ನಂಜರಾಯಪಟ್ಟಣ ಗ್ರಾಮ ವ್ಯಾಪ್ತಿಯಲ್ಲಿ ರೂ. ೪೦ ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದಲ್ಲೂ ಕೂಡ ರೂ. ೪೦ ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಅವಧಿಯಲ್ಲಿ ಈವರೆಗೆ ಒಟ್ಟು ರೂ. ೫ ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಇದೇ ಸಂದರ್ಭ ವಸತಿ ಯೋಜನೆಗೆ ಸಂಬAಧಿಸಿದAತೆ ಸರಕಾರದ ಹೊಸ ನಿಯಮದಿಂದ ಉಂಟಾಗುವ ಬಾಧಕಗಳ ಕುರಿತು ಅವರು ಗ್ರಾಮಸ್ಥರ ಗಮನಕ್ಕೆ ತಂದರು.

ಗ್ರಾಮೀಣ ಭಾಗದ ಕಡು ಬಡವರು, ಕೂಲಿ ಕಾರ್ಮಿಕರು, ದುರ್ಬಲರು ಹಾಗೂ ವಸತಿ ರಹಿತ ಜನಸಾಮಾನ್ಯರು ಮನೆ ನಿರ್ಮಿಸಿಕೊಳ್ಳುವ ಸಂದರ್ಭ ಹಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸ್ವಂತ ಸೂರು ಹೊಂದಬೇಕೆನ್ನುವ ಬಡವರ ಕನಸು ಕನಸಾಗಿಯೇ ಉಳಿಯಲಿದೆ. ಆದ್ದರಿಂದ ಸರಕಾರ ಗ್ರಾಮೀಣ ಜನರ ಹಿತದೃಷ್ಟಿಯಿಂದ ನಿಯಮಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸರಳ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದ ಅವರು ಒಂದು ವೇಳೆ ಸರಕಾರ ನಿಯಮಗಳನ್ನು ಸಡಿಲಿಸದಿದ್ದರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೋರಾಟ ರೂಪಿಸಲಾಗುವುದು. ಈ ಸಂಬAಧ ಶಾಸಕರು ಹಾಗೂ ಸಂಸದರು ಕ್ರಮವಹಿಸುವಂತೆ ಆಗ್ರಹಿಸಿದರು.

ಗ್ರಾ.ಪಂ. ಉಪಾಧ್ಯಕ್ಷೆ ಕುಸುಮ, ಸದಸ್ಯೆ ಸಮೀರಾ, ಪಿಡಿಒ ರಾಜಶೇಖರ್, ಮಾಜಿ ಸದಸ್ಯೆ ಚಂದ್ರಾವತಿ, ಗ್ರಾಮಸ್ಥರಾದ ಕೇಶವ, ಉಮಾವತಿ, ಸೌಮ್ಯ, ಗುತ್ತಿಗೆದಾರ ಫಯಾಜ್, ಸಿಬ್ಬಂದಿ ರಂಜಿತ್ ಇದ್ದರು.