ಕುಶಾಲನಗರ, ಜು. ೫ : ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಕುಶಾಲನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ತಾಲೂಕು ಅಧ್ಯಕ್ಷ ಅಣ್ಣಯ್ಯ, ಮಹಿಳಾ ತಾಲೂಕು ಅಧ್ಯಕ್ಷೆ ರೂಪಾ ಗಣೇಶ್, ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ಕುಶಾಲನಗರ ತಾಲೂಕು ಗೌರವಾಧ್ಯಕ್ಷ ರೊನಾಲ್ಡ್, ಘಟಕಗಳ ಕಾರ್ಯದರ್ಶಿಗಳಾದ ಶೃತಿ ಗಿರೀಶ್, ರವೀಶ್, ಕುಮಾರ್, ಶೈಲಾ ಕಾರ್ಯಕರ್ತರು ಹಾಜರಿದ್ದರು.