ಸೋಮವಾರಪೇಟೆ, ಜು. ೬: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.೯ರಂದು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್(ಎಐಯುಟಿಸಿ) ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ.

ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿAದ ಬೆಳಿಗ್ಗೆ ೧೦ಗಂಟೆಗೆ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು, ಪಟ್ಟಣದ ಮುಖ್ಯ ರಸ್ತೆಯಲ್ಲಿ ತೆರಳಿ ತಾಲೂಕು ಕಚೇರಿಯನ್ನು ತಲುಪಿ ತಹಶೀಲ್ದಾರ್ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕಾರ್ಮಿಕ, ರೈತ, ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ.

೮ ಗಂಟೆಯ ಕೆಲಸದ ಅವಧಿಯನ್ನು ೧೦ ಗಂಟೆಗೆ ಏರಿಸಲು ಕಾನೂನು ರೂಪಿಸುತ್ತಿದೆ. ಕೊಡಗು ಗುಡ್ಡಗಾಡು ಪ್ರದೇಶ ಮತ್ತು ನಾಲ್ಕು ತಿಂಗಳು ಮಳೆಯಿರುತ್ತದೆ. ಬಡ ಕಾರ್ಮಿಕರು ಚಳಿಯಲ್ಲಿ ೧೦ ಗಂಟೆ ಕೆಲಸ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮಸೂದೆಯನ್ನು ರಾಜ್ಯ ಸರ್ಕಾರ ತಿರಸ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತ ಒತ್ತುವರಿ ಸರ್ಕಾರಿ ಜಾಗವನ್ನು ಮುಟ್ಟುಗೋಲು ಹಾಕಿ, ನಿವೇಶನ ರಹಿತ ಕೂಲಿ ಕಾರ್ಮಿಕರಿಗೆ ನಿವೇಶನ ನೀಡಬೇಕೆಂದು ಸೋಮಪ್ಪ ಆಗ್ರಹಿಸಿದರು. ಕಳೆದ ೨೦ ವರ್ಷಗಳಿಂದ ಸಂಘಟನೆ ನಿವೇಶನಕ್ಕಾಗಿ ಪ್ರತಿಭಟನೆ ಮಾಡುತ್ತ ಬಂದಿದೆ. ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ, ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಆದರೆ ಜಿಲ್ಲಾಡಳಿತ ಇದುವರೆಗೆ ನಿವೇಶನ ನೀಡಿಲ್ಲ. ಕಾರ್ಮಿಕರು ಈ ದೇಶದ ಪ್ರಜೆಗಳು. ಕಾರ್ಮಿಕರು ತೆರಿಗೆ ಕಟ್ಟುತ್ತಾರೆ. ನಮಗೂ ಭೂಮಿ ಪಡೆದುಕೊಳ್ಳುವ ಹಕ್ಕಿದೆ. ಕೂಡಲೆ ನಿವೇಶನಗಳನ್ನು ನೀಡಬೇಕೆಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಪಿ.ಟಿ.ಸುಂದರ, ಜಿಲ್ಲಾ ಸಲಹೆಗಾರ ಶೇಷಪ್ಪ ಇದ್ದರು.