ಸಿದ್ದಾಪುರ, ಜು. ೬: ಸಿದ್ದಾಪುರ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಸಭೆ ನಡೆಯಿತು.

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವನೀಯ ಪ್ರವಾಹ ಪೀಡಿತ ಪ್ರದೇಶವಿದ್ದು ಈ ನಿಟ್ಟಿನಲ್ಲಿ ನದಿತೀರದ ನಿವಾಸಿಗಳು ಎಚ್ಚರಿಕೆ ಇರುವಂತೆ ಮನವಿ ಮಾಡಿದರು. ಪ್ರಾಕೃತಿಕ ವಿಕೋಪ ಸಂದರ್ಭ ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ದಾಪುರ ವ್ಯಾಪ್ತಿಯ ಈಜುಗಾರರು. ಜೆಸಿಬಿ. ಕ್ರೇನ್ ಮಾಲೀಕರು ಹಾಗೂ ಆಪರೇಟರ್‌ಗಳು ಆ್ಯಂಬುಲೆನ್ಸ್ ಚಾಲಕರ ಮತ್ತು ಮಾಲೀಕರ ವುಡ್ ಕಟ್ಟರುಗಳ ಸಮ್ಮುಖದಲ್ಲಿ ಸಭೆಯನ್ನು ನಡೆಸಲಾಯಿತು.

ಪ್ರಾಕೃತಿಕ ವಿಕೋಪ ಸಂಭವಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸುವಂತೆ ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿಕೊಂಡರು. ಬೆಟ್ಟಗುಡ್ಡಗಳ ನಿವಾಸಿಗಳು ಕೂಡ ಜಾಗೃತಿ ವಹಿಸುವಂತೆ ತಿಳಿಸಿದರು.

ತುರ್ತು ಸಂದರ್ಭದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವAತೆ ಹಾಗೂ ಸಂಬAಧಪಟ್ಟ ಇಲಾಖೆಯ ವತಿಯಿಂದ ನೇಮಿಸಲಾದ ಅಧಿಕಾರಿಗಳೊಂದಿಗೆ ಕೂಡ ಸಂಪರ್ಕದಲ್ಲಿ ಇರುವಂತೆ ಗ್ರಾಮಸ್ಥರ ಬಳಿ ತಿಳಿಸಿದರು. ಸಭೆಯಲ್ಲಿ ಸಿದ್ದಾಪುರದ ಕ್ರೈಂ ಠಾಣಾಧಿಕಾರಿ ಶಿವಣ್ಣ ಮತ್ತು ಸಹಾಯಕ ಠಾಣಾಧಿಕಾರಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.