ಸಿದ್ದಾಪುರ, ಜು. ೬: ಚೆಟ್ಟಳ್ಳಿಯ ಕೂಡ್ಲೂರು ಚೆಟ್ಟಿಳ್ಳಿ ಗ್ರಾಮದಲ್ಲಿ ಒಂಟಿ ಸಲಗವೊಂದು ವಸತಿ ಪ್ರದೇಶದಲ್ಲಿ ಸುತ್ತಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುನೀತಾ ಮಂಜುನಾಥ್ ಅವರ ಮನೆ ಸಮೀಪ ಒಂಟಿ ಸಲಗ ವಸತಿ ಪ್ರದೇಶದಲ್ಲಿ ಸಂಚರಿಸುತ್ತಿದ್ದು, ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.