ಸಿದ್ದಾಪುರ, ಜು. ೮: ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ಐವರನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಗಳಾದ ಇಂಜಿಲಗೆರೆ ನಿವಾಸಿ ರನೀಶ್ (೩೫) ಗುಹ್ಯ ಗ್ರಾಮದ ನಿವಾಸಿ ಎನ್.ಆರ್. ರಂಜಿತ್ (೨೭) ಕರಡಿಗೋಡು ಗ್ರಾಮದ ನಿವಾಸಿ ಪಿ.ಎಸ್. ಹರೀಶ್ (೨೬) ಹಾಗೂ ಹೆಚ್.ಸಿ. ಸುರೇಶ್ ಕುಮಾರ್ (೨೯) ಅಮ್ಮತ್ತಿಯ ಮುಕ್ಕಾಟಿಕೊಪ್ಪಲು ನಿವಾಸಿ ಜಿ. ಶಿವಕುಮಾರ್ (೨೨) ಎಂಬವರುಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಕ್ರೆöÊಂ ಠಾಣಾಧಿಕಾರಿ ಶಿವಣ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಸಿದ್ದಾಪುರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಿದ್ದಾಪುರ ಠಾಣಾಧಿಕಾರಿ ಮನವಿ ಮಾಡಿದ್ದಾರೆ.