ಮಡಿಕೇರಿ, ಜು. ೮: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಇಲಾಖೆ ವತಿಯಿಂದ ‘ಸಾಮಾಜಿಕ ಆಧಾರಿತ ಸಿವಿಲ್’ ಯೋಜನೆಯಲ್ಲಿ ದಿವ್ಯಾಂಗರಿಗೆ ಸಾಧನ ಸಲಕರಣೆಗಳನ್ನು ಸಂಸದ ಯದುವೀರ್ ಒಡೆಯರ್ ವಿತರಿಸಿದರು.
ನಗರದ ರೆಡ್ಕ್ರಾಸ್ ಭವನದಲ್ಲಿ ವಿಶೇಷಚೇತನರಿಗೆ ಸಾಧನ ಸಲಕರಣೆ ಗಳನ್ನು ವಿತರಿಸಿ ಮಾತನಾಡಿದ ಸಂಸದರು, ಜಿಲ್ಲೆಯ ೨೦೧ ವಿಕಲಚೇತನರಿಗೆ ರೂ. ೨೦ ಲಕ್ಷ ವೆಚ್ಚದ ೩೪೪ ಸಾಧನ ಸಲಕರಣೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ರಾಷ್ಟçದ ಅಭಿವೃದ್ಧಿಗೆ ವಿಶೇಷಚೇತನರು ಸಹ ಹಲವು ಕೊಡುಗೆ ನೀಡಿದ್ದು, ವಿಶೇಷಚೇತನರು ಇತರರಂತೆ ಬದುಕು ನಡೆಸು ವಂತಾಗಲು ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ ಎಂದು ಸಂಸದರು ನುಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದಡಿ ಸಮಗ್ರ ಸಂಪೂರ್ಣ ಅಭಿವೃದ್ಧಿ ಆಗಬೇಕಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಪಾತ್ರವು ಪ್ರಮುಖವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರ ಕೊಡುಗೆ ಅಗತ್ಯ ಎಂದರು.
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ವಿಶೇಷಚೇತನರಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಗೊಳಿಸಿದೆ. ಆ ನಿಟ್ಟಿನಲ್ಲಿ ಸ್ವಾಭಿಮಾನಿ ಮತ್ತು ಸ್ವಾವಲಂಬಿ ಬದುಕು ನಡೆಸಲು ಹಲವು ಕಾರ್ಯಕ್ರಮ ಜಾರಿಗೊಳಿಸಿದೆ ಎಂದರು.
೨೦೪೭ ರೊಳಗೆ ವಿಕಸಿತ ಭಾರತ ಆಗಬೇಕು ಎಂಬ ದೃಷ್ಟಿಯಿಂದ ಸಮಾಜದ ಕಟ್ಟಕಡೆಯವರನ್ನು ಗುರುತಿಸಿ ವಿಶೇಷಚೇತನರು ಸೇರಿದಂತೆ ಎಲ್ಲಾ ಜನ ಸಾಮಾನ್ಯರಿಗೂ ಹಲವು ಕಾರ್ಯಕ್ರಮ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ವಿಶೇಷಚೇತನರು ಸಮಾಜದಲ್ಲಿ ಸತ್ಪçಜೆಗಳಾಗಿ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರಂತೆ ಬದುಕು ನಡೆಸುವಂತಾಗ ಬೇಕು ಎಂದು ಕೆ.ಜಿ. ಬೋಪಯ್ಯ ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಮಾತನಾಡಿ, ವಿಕಲತೆ ಶಾಪವಲ್ಲ. ಆದರೆ ಅದನ್ನು ಮೆಟ್ಟಿ ನಿಲ್ಲುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಉದ್ಯೋಗ ಕೈಗೊಳ್ಳುವಂತಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದರು. ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯಿAದ ವಿಕಲ ಚೇತನರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಸದ್ಯ ೨೫ ಜನರಿಗೆ ರೈನ್ಕೋಟ್ ವಿತರಿಸಲಾಗಿದೆ ಎಂದರು.
ಸರ್ಕಾರದ ಸಹಕಾರದಲ್ಲಿ ರೆಡ್ಕ್ರಾಸ್ ಭವನ ನಿರ್ಮಿಸಲಾಗಿದ್ದು, ಕಟ್ಟಡದ ಮೇಲ್ಬಾಗದಲ್ಲಿ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಸಂಸದರಲ್ಲಿ ಇದೇ ಸಂದರ್ಭದಲ್ಲಿ ಕೋರಿದರು. ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲ ಮಾತನಾಡಿ, ಜಿಲ್ಲೆಯಲ್ಲಿನ ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ನೀಡ ಲಾಗುತ್ತಿದ್ದು, ಮಳೆ ಇರುವ ಕಾರಣ ಆಯಾಯ ತಾಲೂಕು ಮಟ್ಟದಲ್ಲಿ ಸಾಧನ ಸಲಕರಣೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಮಹೇಶ್ವರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾ ಅಧಿಕಾರಿ ಪ್ರಸನ್ನ ಕುಮಾರ್, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಅಂಕಾಚಾರಿ, ರೆಡ್ಕ್ರಾಸ್ ಸಂಸ್ಥೆಯ ಸಹ ಕಾರ್ಯದರ್ಶಿ ಮಧುಕರ್, ನಿರ್ದೇಶಕರಾದ ತೆನ್ನಿರಾ ಮೈನಾ, ಕೆ.ಎಂ. ವೆಂಕಟೇಶ್, ಸತೀಶ್, ವಸಂತ್ ಇತರರು ಇದ್ದರು.