ಗೋಣಿಕೊಪ್ಪಲು, ಜು. ೮: ದ.ಕೊಡಗಿನಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಮತ್ತೋರ್ವ ಅಮಾಯಕ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ದ.ಕೊಡಗಿನ ಬಾಳೆಲೆ ಹೋಬಳಿಯ ಪೊನ್ನಪ್ಪಸಂತೆ ಬಳಿ ನಡೆದಿದೆ. ಆನೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯು ಮಾನಸಿಕ ಅಸ್ವಸ್ಥನೆಂದು ಹೇಳಲಾಗಿದ್ದು ತನಿಖೆ ಮುಂದುವರೆದಿದೆ.
ಪೊನ್ನಪ್ಪಸAತೆಯ ನಿವಾಸಿ ಅಜಯ್ ಎಂಬವರು ಮುಂಜಾನೆ ಏಳು ಗಂಟೆಯ ಸುಮಾರಿಗೆ ಎಂದಿನAತೆ ಸೈಕಲ್ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್ ಮೇಲೆ ದಾಳಿ ಮಾಡಲು ಮುಂದಾಗಿದೆ. ಅದೃಷ್ಟವಶಾತ್ ಆನೆಯ ದಾಳಿಯಿಂದ
(ಮೊದಲ ಪುಟದಿಂದ) ಪಾರಾದ ಅಜಯ್ ಸೈಕಲ್‌ನ್ನು ಸ್ಥಳದಲ್ಲಿಯೇ ಬಿಟ್ಟು ಅಲ್ಲಿಂದ ಓಡುವ ಮೂಲಕ ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ.
ಆಕ್ರೋಶಗೊAಡ ಕಾಡಾನೆಯು ಇದೇ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಾನಸಿಕ ಅಸ್ವಸ್ಥನೆಂದು ಹೇಳಲಾಗಿರುವ ೫೦ರ ಪ್ರಾಯದ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದು, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ತಿತಿಮತಿ ವಲಯ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈಗಾಗಲೇ ಈ ಭಾಗದ ಸುತ್ತಮುತ್ತಲಿನಲ್ಲಿ ಕಾಡಾನೆಗಳ ಉಪಟಳ ಅಧಿಕವಾಗಿದ್ದು ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಆನೆಯ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಅಧಿಕಾರಿಗಳು, ಜನಪ್ರತಿನಿಧಿಗಳು ಕಾಡಾನೆಯ ಹಾವಳಿ ನಿಯಂತ್ರಣಕ್ಕೆ ಹಲವು ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದರೂ ಕಾಡಾನೆಯು ಮಾನವನ ಮೇಲೆ ದಾಳಿ ಮಾಡುವುದು ಕಡಿಮೆಯಾಗುತ್ತಿಲ್ಲ.
ಕಾಡಾನೆಯ ದಾಳಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಜನರು ನೆಮ್ಮದಿಯಾಗಿ ರಸ್ತೆಯಲ್ಲಿಯೇ ನಡೆಯಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಸಂಬAಧಿಸಿದ ಅಧಿಕಾರಿಗಳು ಕಾಡಾನೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.