ಮಡಿಕೇರಿ, ಜು. ೯: ಇತ್ತೀಚಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಹುಲಿತಾಳ ಗ್ರಾಮದ ಯುವಕ ಪ್ರದೀಪ್ ಮನೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕುಟುಂಬ ಸದಸ್ಯರೊಂದಿಗೆ ಮಾತನಾಡಿದ ಸಂಸದರು ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಉಪಾಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ, ಮಡಿಕೇರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ಇದ್ದರು.