ಮಡಿಕೇರಿ, ಜು. ೯: ಇತ್ತೀಚಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಹುಲಿತಾಳ ನಿವಾಸಿ ಪ್ರದೀಪ್ ಕುಟುಂಬಕ್ಕೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ವೈಯಕ್ತಿಕ ಆರ್ಥಿಕ ನೆರವು ನೀಡಿದರು.
ನಿತಿನ್ ಮನೆಗೆ ಭೇಟಿ ನೀಡಿದ ಪೊನ್ನಣ್ಣ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿ ನೆರವು ವಿತರಿಸಿದರು. ಈ ಸಂದರ್ಭ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.