ಗೋಣಿಕೊಪ್ಪಲು, ಜು. ೯: ವೀರಾಜಪೇಟೆ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ೫೧ನೇ ಹುಟ್ಟು ಹಬ್ಬದ ಅಂಗವಾಗಿ ತವರು ಕ್ಷೇತ್ರ ಹುದಿಕೇರಿಯ ಕೊಡವ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು.
ಶಿಬಿರದಲ್ಲಿ ಅನೇಕ ಮಂದಿ ಭಾಗವಹಿಸುವ ಮೂಲಕ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದರು. ೩೫ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.
ಹುದಿಕೇರಿ ಕೊಡವ ಸಮಾಜದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕರ್ನಲ್ ಕೋಟ್ರಮಾಡ ಎ. ನರೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು.
ಆರೋಗ್ಯ ತಪಾಸಣೆಯನ್ನು ಪ್ರತಿಯೊಬ್ಬರು ವರ್ಷಕ್ಕೊಮ್ಮೆಯಾದರೂ ಮಾಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.
ಹುದಿಕೇರಿ ವಲಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ರಕ್ತನಿಧಿಯ ತಜ್ಞ ವೈದ್ಯರು ಪಾಲ್ಗೊಂಡಿದ್ದರು.
ಆರೋಗ್ಯ ತಪಾಸಣೆ, ಹಲ್ಲು ಕೀಳುವುದು, ಹಲ್ಲಿನ ಸ್ವಚ್ಛತೆ ಹಾಗೂ ಹಲ್ಲು ಕುಳಿ ತುಂಬುವುದು, ಕೃತಕ ದಂತಪAಕ್ತಿ ನೀಡುವುದು, ಕಫ ಪರೀಕ್ಷೆ ಬಿಪಿ, ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆ, ಕಾಲಿನ ನರಗಳ ಉರಿಯೂತ ತಪಾಸಣೆ, ರಕ್ತಹೀನತೆ ಪರೀಕ್ಷೆ, ಶ್ರವಣ ಪರೀಕ್ಷೆ ನಡೆಯಿತು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎ.ಜೆ.ಬಾಬು, ವಲಯ ಕಾಂಗ್ರೆಸ್ ಅಧ್ಯಕ್ಷ ಚಂಗುಲAಡ ಸೂರಜ್, ಮಾಜಿ ಎಂ ಎಲ್ ಸಿ ಅರುಣ್ ಮಾಚಯ್ಯ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ, ಬೆಳೆಗಾರರಾದ
(ಮೊದಲ ಪುಟದಿಂದ) ಚೆಕ್ಕೇರ ಸುದೀರ್, ಚೆಕ್ಕೇರ ವಾಸು ಕುಟ್ಟಪ್ಪ,ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮಾಜಿ ಜಿಲ್ಲಾ ಪರಿಷತ್ ಸದಸ್ಯರಾದ ಪೆಮ್ಮಂಡ ಪೊನ್ನಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೆರ ಭಾರತಿ, ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್, ವೈದ್ಯರಾದ ಡಾ. ಕರುಂಬಯ್ಯ, ತಾಲೂಕು ವೈದ್ಯಾಧಿಕಾರಿ ಡಾ. ಯತೀರಾಜ್ ಸೇರಿದಂತೆ ವಿವಿಧ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು.