ಮಡಿಕೇರಿ, ಜು. ೯: ಭಾರಿ ಗಾಳಿ ಮಳೆಯಿಂದ ಗರ್ವಾಲೆ ಅಂಗನವಾಡಿ ಕೇಂದ್ರದ ಮೇಲೆ ಬೃಹತ್ ಗಾತ್ರದ ಎರಡು ಮರಗಳು ಉರುಳಿ ಬಿದ್ದ ಪರಿಣಾಮ ಗಾಯಗೊಂಡಿದ್ದ ಅಂಗನವಾಡಿ ಸಹಾಯಕಿ ಬೇಬಿ ಅವರ ಆರೋಗ್ಯವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ವಿಚಾರಿಸಿ ಧೈರ್ಯ ತುಂಬಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಬೇಬಿ ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿ ಚಿಕಿತ್ಸೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ವೈದ್ಯರೊಂದಿಗೆ ಮಾತುಕತೆ ನಡೆಸಿ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದು ಅಗತ್ಯ ಚಿಕಿತ್ಸೆ ನೀಡಿ ಶೀಘ್ರ ಗುಣಮುಖರಾಗುವಂತೆ ಮಾಡಬೇಕೆಂದು ಸೂಚಿಸಿದರು.