ಮಡಿಕೇರಿ, ಜು. ೯ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಮೂರ್ನಾಡಿನ ಕುಂಬಳದಾಳು ಗ್ರಾಮದ ನಿವಾಸಿ ಡಿ. ನಂದಕುಮಾರ್ ಎಂಬಾತನ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಘಟನೆ ಹಿನ್ನೆಲೆ : ದಿನಾಂಕ ೧೩.೮.೨೦೨೧.ರಂದು ಅಪ್ರಾಪ್ತ ನೊಂದ ಬಾಲಕಿಯು ಲೈನ್ ಮನೆಯಲ್ಲಿ ಒಬ್ಬಳೇ ಇದ್ದಾಗ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಶಿಕ್ಷೆ

(ಮೊದಲ ಪುಟದಿಂದ) ಆರೋಪಿಯು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ನೊಂದ ಬಾಲಕಿಯ ತಂದೆ ನೀಡಿದ ದೂರಿನ ಸಂಬAಧ ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಮಹಿಳಾ ಪೊಲೀಸ್ ಉಪ ನಿರೀಕ್ಷಕಿ ಕೆ.ಬಿ. ಅಚ್ಚಮ್ಮ ಅವರು ನಡೆಸಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಕಾಯ್ದೆ ಅಡಿಯ ಅಪರಾಧಕ್ಕಾಗಿ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಅವರು ವಿಚಾರಣೆ ಕೈಗೊಂಡು ಆರೋಪ ಸಾಬೀತಾದ ಹಿನ್ನೆಲೆ ನಂದಕುಮಾರ್‌ಗೆೆ ಶಿಕ್ಷೆ ವಿಧಿಸಿದ್ದಾರೆ.

ಲೈಂಗಿಕ ಕಿರುಕುಳ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ೧ ವರ್ಷ ಸಜೆ, ಪೋಕ್ಸೋ ಕಾಯ್ದೆ ಅಡಿಯಲ್ಲಿ ೩ ವರ್ಷ ಸಜೆ ಮತ್ತು ರೂ. ೩೦೦೦ ದಂಡ ಹಾಗೂ ನೊಂದ ಬಾಲಕಿಗೆ ಒಂದು ಲಕ್ಷ ಪರಿಹಾರ ನೀಡಬೇಕೆಂದು ತೀರ್ಪು ನೀಡಿ ಆದೇಶಿಸಿದ್ದಾರೆ.

ಸರಕಾರದ ಪರ ವಿಶೇಷ ಅಭಿಯೋಜಕರಾದ ಬಿ.ಎಸ್. ರುದ್ರ ಪ್ರಸನ್ನ ವಾದ ಮಂಡಿಸಿದ್ದರು.