ಮಡಿಕೇರಿ, ಜು. ೧೦: ರೂ. ೨೦ ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಮೇಕೇರಿ - ಬಿಳಿಗೇರಿಯಿಂದ ತೋರಮಣ ಲಿಂಕ್ ರಸ್ತೆ ಹಾಗೂ ಬಿಳಿಗೇರಿ ಶಾದಿ ಮಹಲ್ ರಸ್ತೆಯನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕÀ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ ಚೂರಿಕಾಡು ರಸ್ತೆ ರೂ. ೧೫ ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷÀ ಧರ್ಮಜ ಉತ್ತಪ್ಪ ಸೇರಿದಂತೆ ಇತರರು ಇದ್ದರು.