ಕುಶಾಲನಗರ, ಜು. ೧೦: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯಾದ ಆಶಾಕಿರಣ ದೃಷ್ಟಿಕೇಂದ್ರದ ಸೇವೆ ಅಗತ್ಯ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ, ರಾಷ್ಟಿçÃಯ ಅಂಧತ್ವ ಮತ್ತು ದೃಷ್ಟಿ ಮಾಂದ್ವತೆ ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ೧ ಕೋಟಿ ಜನರಿಗೆ ದೃಷ್ಟಿ ಸಮಸ್ಯೆ ಇದೆ. ೫ ವರ್ಷದಿಂದ ೯೦ ವರ್ಷದ ವರೆಗೆ ಕಣ್ಣಿನ ಸಮಸ್ಯೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂಧತ್ವ ಪ್ರಮಾಣ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಆಶಾಕಿರಣ ದೃಷ್ಟಿ ಕೇಂದ್ರ ಸ್ಥಾಪಿಸಲಾಗಿದೆ.
ಉಚಿತವಾಗಿ ಪರೀಕ್ಷೆ ಮಾಡಿ ಕನ್ನಡಕವನ್ನು ಕೊಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯತೆ ಕಂಡುಬAದರೆ ಜಿಲ್ಲಾಸ್ಪತ್ರೆಗೆ ದಾಖಲಿಸುವ ಕೆಲಸವಾಗಬೇಕಾಗಿದೆ. ಎಂದರು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಕಾಮಗಾರಿಗಳಿಗೆ ರೂ.೮೨ ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ಮಾತನಾಡಿ, ಆಶಾಕಿರಣ ಯೋಜನೆ ಸರ್ಕಾರದ ಕನಸಿನ ಯೋಜನೆಯಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಕಣ್ಣಿನ ತೊಂದರೆಗೆ ಉಚಿತ ಚಿಕಿತ್ಸೆ ಮಾಡಿ ಕನ್ನಡಕ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಹಾಗೂ ಜಿಲ್ಲೆಯಲ್ಲೂ ಈ ಯೋಜನೆ ಅನುಷ್ಠಾನಗೊಂಡಿದೆ. ಕಳೆದ ವರ್ಷ ಆರು ಸಾವಿರ ಜನರಿಗೆ ತಪಾಸಣೆ ಮಾಡಲಾಗಿತ್ತು. ಈ ವರ್ಷ ಕೂಡ ತಪಾಸಣೆ ಮಾಡಲಾಗುತ್ತಿದ್ದು, ಇದುವರೆಗೆ ೧೨೨೦ ಮಂದಿಗೆ ಕನ್ನಡಕ ವಿತರಣೆ ಮಾಡಲಾಗಿದೆ ಎಂದರು. ಬಡವರಿಗೆ ಈ ಸೇವೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ವೈದ್ಯಾಧಿಕಾರಿ ಡಾ.ಆನಂದ್, ಆರೋಗ್ಯರಕ್ಷಾ ಸಮಿತಿ ಸದಸ್ಯರಾದ ದಾಮೋದರ್, ಕೂಡಿಗೆ ಟಿ.ಪಿ. ಹಮೀದ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ. ಶಾಂತಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಎಂ.ಎನ್. ಮಧುಸೂದನ್ ಹಾಗೂ ವೈದ್ಯರು, ಇಲಾಖಾ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಇದ್ದರು.