ಮಡಿಕೇರಿ, ಜು. ೧೦: ಪ್ರಾಕೃತಿಕ ವಿಕೋಪದಂತಹ ಪರಿಸ್ಥಿತಿ ಎದುರಾದಲ್ಲಿ ಸ್ವಯಂಸೇವಕರು ಆಡಳಿತದೊಂದಿಗೆ ಕೈಜೋಡಿಸಬೇಕೆಂದು ಮಡಿಕೇರಿ ನಗರ ಠಾಣಾಧಿಕಾರಿ ಅನ್ನಪೂರ್ಣ ಮನವಿ ಮಾಡಿದರು.

ಮಳೆಗಾಲ ಹಿನ್ನೆಲೆ ಸ್ವಯಂ ಸೇವಕರು, ಸಂಘ-ಸAಸ್ಥೆಗಳ ಪ್ರಮುಖರೊಂದಿಗೆ ಠಾಣೆಯಲ್ಲಿ ಸಭೆ ನಡೆಸಿದ ಅವರು, ಹವಾಮಾನ ಇಲಾಖೆ ಮಳೆ ಹೆಚ್ಚಾಗುವ ಮುನ್ಸೂಚನೆ ನೀಡಿದೆ. ಕಳೆದ ಕೆಲವು ವರ್ಷಗಳಲ್ಲಿ ಜಿಲ್ಲೆಯಲ್ಲಿ ವಿಪತ್ತು ಸಂಭವಿಸಿ ಸಾವು-ನೋವುಗಳು ಸಂಭವಿಸಿದ್ದವು. ಈ ಹಿನ್ನೆಲೆ ಯಾವುದೇ ಅಪಾಯ ಉಂಟಾಗದAತೆ ಎಚ್ಚರಿಕೆ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ಜನರು ಕೂಡ ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಬೇಕು. ತಮ್ಮ ವ್ಯಾಪ್ತಿಯಲ್ಲಿ ಸಂಭವನೀಯ ಅಪಾಯಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕೆ ಮುಂದಾಗಬೇಕೆAದು ಸಲಹೆಗಳನ್ನು ನೀಡಿದರು. ಈ ಸಂದರ್ಭ ಸಹಾಯಕ ಉಪನಿರೀಕ್ಷಕಿ ರಾಧಾ ಸೇರಿದಂತೆ ಇನ್ನಿತರರು ಹಾಜರಿದ್ದರು.