ಸೋಮವಾರಪೇಟೆ, ಜು. ೧೦: ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಜೊತೆಗೂಡಿ ಪಟ್ಟಣದ ಕ್ರಿಯೇಟಿವ್ ಅಕಾಡೆಮಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ವೆಟರ್‌ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಮಹೇಶ್ ಜೈನಿ, ಎಸ್.ಆರ್. ಸೋಮೇಶ್ ಸೇರಿದಂತೆ ಇತರರು ಇದ್ದರು.