ಮಡಿಕೇರಿ, ಜು. ೧೦: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯು.ಪಿ.ಎಸ್.ಸಿ./ಕೆ.ಎ.ಎಸ್. ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆ.ಪಿ.ಎಸ್.ಸಿ. ಗ್ರೂಪ್-“ಸಿ”, ಆರ್.ಆರ್.ಬಿ. ಮತ್ತು ಎಸ್.ಎಸ್.ಸಿ. ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿes ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯವಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ ಯು.ಪಿ.ಎಸ್.ಸಿ./ ಕೆ.ಎ.ಎಸ್. ಗೆಜೆಟೆಡ್ ಪ್ರೊಬೇಷನರ್, ಕೆ.ಪಿ.ಎಸ್.ಸಿ. ಗ್ರೂಪ್-“ಸಿ” ತರಬೇತಿಗೆ ಕನಿಷ್ಟ ೨೧ ಹಾಗೂ ಗರಿಷ್ಟ ೩೫ ವರ್ಷಗಳು ಮತ್ತು ಆರ್‌ಆರ್‌ಬಿ ಮತ್ತು ಎಸ್.ಎಸ್.ಸಿ. ತರಬೇತಿಗಳಿಗೆ ಕನಿಷ್ಟ ೧೮ ಹಾಗೂ ಗರಿಷ್ಠ ೩೦ ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ) ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐ.ಎ.ಎಸ್./ ಕೆ.ಎ.ಎಸ್. ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ಆಗಸ್ಟ್ ೨ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ : ೮೨೭೭೭೯೯೯೯೦ ಇವರನ್ನು, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ೯೯೭೨೭೯೯೦೯೧, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂ. ಸಂ. ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್ಗೆ

ಮಡಿಕೇರಿ, ಜು. ೧೦: ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

೨೦೨೫-೨೬ನೇ ಸಾಲಿಗೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ/ಸರ್ಟಿಫಿಕೆಟ್ ಕೋರ್ಸ್ಗಳಿಗೆ hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom (ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪೋರ್ಟಲ್) hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ (ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು) ಅಥವಾ ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಡ್ಮಿಷನ್ ಲಿಂಕ್ (hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲ್ಲಿಸಬಹುದು.

ವಿದ್ಯಾರ್ಥಿಯು ಖುದ್ದಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿ ಮೈಸೂರು ಅಥವಾ ತಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ ಪ್ರಾದೇಶಿಕ ಕೇಂದ್ರ, ಹಜ್ ಕಚೇರಿ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ ೨೫ ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು). ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ, ಪೋಷಕರ ಕುಟುಂಬದ ವಾರ್ಷಿಕ ಆದಾಯವು ರೂ. ೮ ಲಕ್ಷಗಳನ್ನು ಮೀರಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ

ಮಡಿಕೇರಿ, ಜು. ೧೦: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ- ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು. ಇವರು ವಿವಿಧ ಲೋವರ್ ಡಿವಿಷನ್ ಕ್ಲರ್ಕ್ (ಎಲ್.ಡಿ.ಸಿ.) ಮತ್ತು ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ “ಎ” ೩೧೩೧ ಹುದ್ದೆಗಳ ನೇಮಕಾತಿಗೆ ಸಂಯೋಜಿತ ಉನ್ನತ ಮಾಧ್ಯಮಿಕ ಪರೀಕ್ಷೆ (ಸಿ.ಹೆಚ್.ಎಸ್.ಎಲ್.ಇ.) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಮಾನ್ಯತೆ ಪಡೆದ ಮಂಡಳಿಯಿAದ ೧೨ನೇ ತರಗತಿ ಅಥವಾ ತತ್ಸಮಾನ. ನಿರ್ದಿಷ್ಟ ಹುದ್ದೆಗಳ ಅಪೇಕ್ಷಣೀಯ ಅರ್ಹತೆಯ ವಿವರಗಳಿಗೆ (ಎಸ್.ಎಸ್.ಸಿ.) ಅಧಿಸೂಚನೆಯ ಪ್ಯಾರಾ-೮ ಅನ್ನು ಪರಿಶೀಲಿಸಬಹುದು. ೧೮ ರಿಂದ ೨೭ ವರ್ಷದೊಳಗಿರಬೇಕು. ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ ಅಧಿಸೂಚನೆಯ ಪ್ಯಾರಾ-೫ ಅನ್ನು ಪರಿಶೀಲಿಸಬಹುದು. ಪರೀಕ್ಷೆಯ ಸಂಭವನೀಯ ದಿನಾಂಕ ಸೆಪ್ಟೆಂಬರ್, ೮ ರಿಂದ ಸೆಪ್ಟೆಂಬರ್, ೧೮ ರವರೆಗೆ, ಶುಲ್ಕ ರೂ. ೧೦೦ (ಎಸ್.ಸಿ., ಎಸ್.ಟಿ.) ಮಹಿಳೆ, ದಿವ್ಯಾಂಗರು, ಮಾಜಿ ಸೈನಿಕರಿಗೆ ಶುಲ್ಕವಿಲ್ಲ). ಅರ್ಜಿ ಸಲ್ಲಿಸಲು ತಾ. ೧೮ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ದೂ. ಸಂ. ೯೪೪೯೬೯೨೬೯೧ ಮತ್ತು ವೆಬ್‌ಸೈಟ್ ತಿತಿತಿ.ssಛಿಞಞಡಿ.ಞಚಿಡಿ.ಟಿiಛಿ.iಟಿ ವಿಳಾಸವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.