ಮಡಿಕೇರಿ, ಜು. ೧೧: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾಲಯ ವಿಭಾಗವು ೨೦೨೫ನೇ ಸಾಲಿನ ಪ್ರಾಧ್ಯಾಪಕ ಭೂಷಣ ಪ್ರಶಸ್ತಿಯನ್ನು ಘೋಷಿಸಿದ್ದು, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರೊಫೆಸರ್ ವಿಜಯಲತ ಅವರು ಕೂಡ ಅತ್ಯುತ್ತಮ ಗ್ರಂಥಪಾಲಕರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕ ಅಧ್ಯಾಪಕರ ಶೈಕ್ಷಣಿಕ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ವಾರ್ಷಿಕವಾಗಿ ನೀಡಲಾಗುತ್ತದೆ. ಪ್ರೊಫೆಸರ್ ವಿಜಯಲತ ಅವರು ಎಫ್.ಎಂ.ಸಿ. ಕಾಲೇಜಿನಲ್ಲಿ ಗ್ರಂಥಪಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.