ಸಿದ್ದಾಪುರ, ಜು. ೧೧: ಅಮ್ಮತ್ತಿ ಲಯನ್ಸ್ ಕ್ಲಬ್ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಸ್.ಎಸ್. ಪೂಣಚ್ಚ ಅವರು ಆಯ್ಕೆಗೊಂಡಿದ್ದಾರೆ. ಅಮ್ಮತ್ತಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ. ಕನ್ನಿಕ ಅಯ್ಯಪ್ಪ ಮಾತನಾಡಿ, ಲಯನ್ಸ್ ಕ್ಲಬ್ ಸದಸ್ಯರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಲಯನ್ಸ್ ಕ್ಲಬ್ ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಸ್.ಎಸ್. ದಾದು ಪೂಣಚ್ಚ, ಕಾರ್ಯದರ್ಶಿಯಾಗಿ ಯು.ಟಿ. ಕಾರ್ಯಪ್ಪ, ಖಜಾಂಚಿಯಾಗಿ ಕೆ.ಸಿ. ದಿನೇಶ್ ಅವರನ್ನು ಆಯ್ಕೆ ಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಆರತಿ ಕಾರ್ಯಪ್ಪ, ಕಾರ್ಯದರ್ಶಿ ಕೃತಿನ ಪೂಣಚ್ಚ, ಜ್ಯೋತಿ ಪೊನ್ನಪ್ಪ, ಕೋಡಿರ ದಿನೇಶ್ ಹಾಜರಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಲಯನ್ಸ್ ಕ್ಲಬ್‌ನ ಸದಸ್ಯರುಗಳು ಭಾಗವಹಿಸಿದ್ದರು.