ಮಡಿಕೇರಿ, ಜು. ೧೧: ಜಿಲ್ಲಾ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ ಸಭೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ಬಲವರ್ಧನೆ, ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಪರಿಹಾರ ಸಂಬAಧ ಕಾರ್ಯೋನ್ಮುಖ ಗೊಳ್ಳುವತ್ತ ಚರ್ಚೆ ನಡೆಸಲಾಯಿತು. ನೌಕರರಿಗೆ ತರಬೇತಿ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು.
ಇದೇ ಸಂದರ್ಭ ಸಂಘದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಎಸ್. ಮಹೇಂದ್ರ, ಉಪಾಧ್ಯಕ್ಷೆ ರಾಣಿ ರವೀಂದ್ರ, ಪ್ರಧಾನ ಕಾರ್ಯದರ್ಶಿ ನಂದೀಶ್ ಕುಮಾರ್, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಸುನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಅಮರ್, ಶಂಭು, ರವಿಕಾಂತ್, ಮುದ್ರಸ್ವಾಮಿ, ಸುಶೀಲಾ, ರೇಖಾ, ಹರೀಶ್, ಮೋಹನ್, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.