ಶ್ರೀಮಂಗಲ, ಜು. ೧೧: ಆಗಸ್ಟ್ ೩ ರಂದು ಕಕ್ಕಡ ಪದ್‌ನೆಟ್ಟ್ ಪ್ರಯುಕ್ತ ಪೊನ್ನಂಪೇಟೆಯಿAದ ಬೆಕ್ಕೆಸೊಡ್ಲೂರು ವರೆಗೆ ೧೦ ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಜಂಟಿ ಅಶ್ರಯದಲ್ಲಿ ನಡೆಸಲಾಗುವುದು ಎಂದು ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಉಳುವಂಗಡ ಲೋಹಿತ್ ಭೀಮಯ್ಯ ತಿಳಿಸಿದರು.

ಪೊನ್ನಂಪೇಟೆಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದ ಅವರು, ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ಒಂದು ನೋಂದಾಯಿತ ಸಂಸ್ಥೆಯಾಗಿದ್ದು, ಸಾಮಾಜಿಕ ಕಳಕಳಿಯಿಂದ ಕಳೆದ ನಾಲ್ಕು ವರ್ಷಗಳಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಸುಮಾರು ೨೫ ಬಡ ಕುಟುಂಬಗಳಿಗೆ ಕಳೆದ ೪ ವರ್ಷದಿಂದ ಪ್ರತಿ ತಿಂಗಳು ದಿನಸಿ ಪದಾರ್ಥವನ್ನು ನೀಡುತ್ತಾ ಬರುತ್ತಿದೆ. ಅಲ್ಲದೆ ಸಾಕಷ್ಟು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವನ್ನು ದಾನಿಗಳ ಸಹಕಾರದಿಂದ ನೀಡುತ್ತಾ ಬರುತ್ತಿದೆ. ಅಲ್ಲದೆ ರೋಗಿಗಳಿಗೆ ಶ್ರೀ ಸತ್ಯಸಾಯಿ ಆಸ್ಪತ್ರೆಯೊಂದಿಗೆ ಸಂಪರ್ಕ ಇಟ್ಟುಕೊಂಡು ವೈದ್ಯಕೀಯ ನೆರವನ್ನು ಸಹ ಟ್ರಸ್ಟ್ ವತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಇದರ ಮುಂದುವರಿದ ಭಾಗವಾಗಿ ಟ್ರಸ್ಟ್ನ ವತಿಯಿಂದ ಜನಸಾಮಾನ್ಯರಲ್ಲಿ ಆರೋಗ್ಯದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕಿರಿಯರಿಂದ ಹಿರಿಯರವರೆಗೆ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಆಗಸ್ಟ್ ೩ ರಂದು ಬೆಳಿಗ್ಗೆ ೭.೩೦ ಕ್ಕೆ ಪೊನ್ನಂಪೇಟೆಯಿAದ ಬೆಕ್ಕೆಸೊಡ್ಲೂರುವರೆಗೆ ೧೦ ಕಿ.ಮೀ. ಫ್ಯಾಮಿಲಿ ರನ್ ಏರ್ಪಡಿಸಲಾಗಿದೆ. ಈ ಸ್ಪರ್ಧೆ ಟ್ರಸ್ಟ್ನ ಕಾರ್ಯಕ್ರಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜನೆ ಮಾಡಲಾಗಿದೆ. ೧೬ ವರ್ಷದ ಒಳಗೆ ಇರುವ ಹುಡುಗರು ಮತ್ತು ಹುಡುಗಿಯರಿಗೆ ೫ ಕಿ.ಮೀ, ೩೫ ವರ್ಷಕ್ಕೆ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಹಾಗೂ ೧೦ ಕಿ.ಮೀ ಮುಕ್ತ ಓಟದ ಸ್ಪರ್ಧೆ, ಪುರುಷ ಹಾಗೂ ಮಹಿಳೆಯರಿಗೆ ಮ್ಯಾರಥಾನ್ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನದೊಂದಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕ ಚೊಟ್ಟೆಕ್‌ಮಾಡ ರಾಜೀವ್ ಬೋಪಯ್ಯ, ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ತತ್ವಂ ಅಸಿ ಟ್ರಸ್ಟ್ನ ಕೊಣಿಯಂಡ ಮಂಜು ಮಾದಯ್ಯ ಉಪಸ್ಥಿತರಿದ್ದರು.