ಮಡಿಕೇರಿ, ಜು. ೧೧: ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟಂತೆ ೧೩ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ೩೨ ಅಂಗನವಾಡಿ ಸಹಾಯಕಿ ಹುದ್ದೆಗೆ ತಾ. ೮ ರಂದು ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್‌ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ.
ಈ ಬಗ್ಗೆ ಸಂಬAಧಿಸಿದವರಿಗೆ ಆಕ್ಷೇಪಣೆ ಇದ್ದಲ್ಲಿ ತಾ. ೧೫ ರ ಕಚೇರಿ ವೇಳೆ ೫.೩೦ ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ದೂ. ೦೮೨೭೨-೨೯೫೦೮೭ನ್ನು ಸಂಪರ್ಕಿಸಬಹುದು ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.