ನಾಪೋಕ್ಲು, ಜು. ೧೧: ‘ದೇಶ ಕಾಯೋಣ ಬನ್ನಿ’ ಎಂದು ವಿದ್ಯಾರ್ಥಿಗಳಿಗೆ ಯೋಧ ಎಂ.ಬಿ. ಬೆಳ್ಳಿಯಪ್ಪ ಅವರು ಕರೆ ನೀಡಿದರು,
ಇಲ್ಲಿಗೆ ಸಮೀಪದ ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನೀಡುವ ಸ್ವಾಗತ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇದೇ ಸಂಸ್ಥೆಯಲ್ಲಿ ಐದು ವರ್ಷಗಳ ಕಾಲ ಅಧ್ಯಯನ ಮಾಡಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಬಿ. ಬೆಳ್ಳಿಯಪ್ಪ ಅವರು ವಿದ್ಯಾರ್ಥಿಗಳಿಗೆ ತಮ್ಮ ಸೇನೆಯ ಅನುಭವವನ್ನು ಹಂಚಿಕೊAಡು ಸೇನೆಗೆ ಸೇರುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ವಿದ್ಯಾರ್ಥಿಗಳು ಉನ್ನತಿಯನ್ನು ಹೊಂದಬೇಕಾದರೆ ಕಾರ್ಯಸಾಧನೆಗೆ ಶಿಸ್ತು ಮತ್ತು ಪ್ರಾಮಾಣಿಕ ಪ್ರಯತ್ನಬೇಕು ಎಂದು ಕಿವಿಮಾತಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಿ.ಎಸ್. ರಾಮಕೃಷ್ಣ ವಹಿಸಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಿ.ಆರ್. ಲೋಕೇಶ್, ಉಪನ್ಯಾಸಕರು, ಅಧ್ಯಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮುಫೀದಾ ಸ್ವಾಗತಿಸಿದರೆ, ರಾಹುಲ್ ಕಾರ್ಯಕ್ರಮವನ್ನು ನಿರ್ವಹಿಸಿ, ಸ್ಪಂದನ್ ವಂದಿಸಿದರು.