ನಾಪೋಕ್ಲು, ಜು. ೧೧: ಇಲ್ಲಿನ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಗುರುವಾರ ಭೂಮಿಪೂಜೆಯನ್ನು ನೆರವೇರಿಸಲಾಯಿತು. ರೂ. ೧೫ ಲಕ್ಷ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗುವ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಮತ್ತು ಸದಸ್ಯರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಶಶಿ ಮಂದಣ್ಣ, ಗ್ರಾಮ ಪಂಚಾಯಿತಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯ ಕುಶು ಕುಶಾಲಪ್ಪ, ಅರುಣ್ ಬೇಬ, ಹೇಮಾ ಅರುಣ್, ಕೆ.ವೈ. ಅಶ್ರಫ್, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಡಾ. ಲಿಂಗರಾಜ್ ದೊಡ್ಡಮನಿ, ಸಹಾಯಕ ನಿರ್ದೇಶಕ. ಕೆ.ಎ. ಪ್ರಸನ್ನ, ಪಶು ವೈದ್ಯಾಧಿಕಾರಿ ಡಾ. ಶಿಲ್ಪಶ್ರೀ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅರ್ಚಕ ಮಕ್ಕಿ ದಿವಾಕರ ಪೂಜೆ ನೆರವೇರಿಸಿದರು.